Top

ಇಂದು ವಿಶ್ವಾಸಮತ ಯಾಚಿಸಲಿರುವ ಕುಮಾರಸ್ವಾಮಿ

ಇಂದು ವಿಶ್ವಾಸಮತ ಯಾಚಿಸಲಿರುವ ಕುಮಾರಸ್ವಾಮಿ
X

ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡು, ಸಿಎಂ ಸ್ಥಾನಕ್ಕೇರಿರುವ ಹೆಚ್.ಡಿ.ಕುಮಾರಸ್ವಾಮಿ ಇಂದು ವಿಶ್ವಾಸಮತ ಯಾಚಿಸಲಿದ್ದಾರೆ. ಈ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ.ವಿಧಾನಸೌಧದ ಬಳಿ 2ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದ್ದು, ಸಿಎಆರ್, ಕೆಎಸ್ ಆರ್ ಪಿ, ಆರೆಸೇನಾ ಪಡೆಗಳು ನಿಯೋಜಿಸಲಾಗಿದೆ.ಅಲ್ಲದೇ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ನೆ ಜಾರಿಗೊಳಿಸಲಾಗಿದೆ. ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರ ವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಸ್ಥಳದಲ್ಲಿ ಪ್ರತಿಭಟನೆ, ಧರಣಿ ನಡೆಸಿ ಅಧಿವೇಶನ ಕಾರ್ಯಕಲಾಪಗಳಿಗೆ ಅಡಚಣೆ ಉಂಟು ಮಾಡುವ ಸಾಧ್ಯತೆ ಇದ್ದ ಕಾರಣ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ನಿಷೇಧಾಜ್ಞೆಗೆ ಆದೇಶಿಸಿದ್ದಾರೆ. ಅಲ್ಲದೇ ಮೆರವಣಿಗೆ, ಸಭೆ ನಡೆಸುವುದು, ಮಾರಕಾಸ್ತ್ರ ಹಿಡಿದು ಓಡಾಡುವುದು, ಸ್ಪೋಟಕ ವಸ್ತು ಸಿಡಿಸುವುದು, ಪ್ರತಿಕೃತಿಗಳನ್ನ ಸಿಡಿಸುವುದು, ಪ್ರಚೋದಿಸುವ ಬಹಿರಂಗ ಘೋಷಣೆ ಕೂಗುವುದು ನಿಷೇಧಿಸಲಾಗಿದೆ.

Next Story

RELATED STORIES