Top

ಸಾಲಮನ್ನಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು: ರಾಜ್ಯದ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡೆಸಿ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದ ಸಿಎಂ ಸದ್ಯದ ಆರ್ಥಿಕ ಪರಿಸ್ಥಿತಿ, ರೈತರು ಕೃಷಿ ಚಟುವಟಿಕೆಗೆ ಪಡೆದುಕೊಂಡಿರುವ ಒಟ್ಟು ಸಾಲದ ಪ್ರಮಾಣ, ಹಿಂದಿನ ಸರ್ಕಾರದಲ್ಲಿ ಸಾಲ ಮನ್ನಾ ಮಾಡಿರುವ ಬಾಕಿ ನೀಡಬೇಕಿರುವ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಅಲ್ಲದೇ ಏಕಕಾಲಕ್ಕೆ ರೈತರ ಸಂಪೂರ್ಣ ಸಾಲ ಮನ್ನಾಮಾಡುವುದರಿಂದ ಸರ್ಕಾರ ಆರ್ಥಿಕ ಪರಿಸ್ಥಿತಿ ಮೇಲೆ ಆಗುವ ವ್ಯತಿರಿಕ್ತ ಪರಿಣಾಮ ಹಾಗೂ ಸಂಪನ್ಮೂಲ ಕ್ರೋಢಿಕರಣಕ್ಕೆ ಇರುವ ಮಾರ್ಗಗಳ ಬಗ್ಗೆಯೂ ಮುಖ್ಯಮಂತ್ರಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ನಡೆದ ಸಭೆಯಲ್ಲಿ ಸಂಪೂರ್ಣ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳ ಜೊತೆ ಮತ್ತೊಂದು ಸಭೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಮುಖ್ಯಕಾರ್ಯದರ್ಶಿ ರತ್ನಪ್ರಭಾ, ಹಣಕಾಸು ಇಲಾಖೆ ಎಸಿಎಸ್ ಐ ಎಸ್ ಎನ್ ಪ್ರಸಾದ್ ಹಾಗೂ ಹಣಕಾಸು ಇಲಾಖೆಯ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.

Next Story

RELATED STORIES