Top

ಅಧಿಕಾರಕ್ಕಾಗಿ ಒಂದಾಗುತ್ತಿರುವ ಪ್ರತಿಪಕ್ಷಗಳು: ಮೋದಿ ಆರೋಪ

ಅಧಿಕಾರಕ್ಕಾಗಿ ಒಂದಾಗುತ್ತಿರುವ ಪ್ರತಿಪಕ್ಷಗಳು: ಮೋದಿ ಆರೋಪ
X

ಅಧಿಕಾರಕ್ಕಾಗಿ ಪ್ರತಿಪಕ್ಷಗಳು ಒಂದಾಗುತ್ತಿವೆ ಹೊರತು ದೇಶದ ಅಭಿವೃದ್ಧಿಗಾಗಿ ಅಲ್ಲ. ನಮ್ಮ ಸರಕಾರ ನಾಲ್ಕು ವರ್ಷಗಳ ಸಾಧನೆಗೇ ದೇಶದಲ್ಲೇಡೆ ನಡೆದ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್​ಡಿಎ ಸರಕಾರ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಟಕ್​ನಲ್ಲಿ ನಡೆದ ಬಹಿರಂಗ ಸಮಾರಂಭದಲ್ಲಿ ಮಾತನಾಡಿದ ಮೋದಿ, ನಾಲ್ಕು ವರ್ಷಗಳಲ್ಲಿ ನಮ್ಮ ಸರಕಾರ ದೇಶ ಚಿತ್ರಣ ಬದಲಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಾಲ್ಕು ವರ್ಷಗಳ ಅವಧಿಯಲ್ಲಿ ನಡೆದ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶವೇ ಸಾಕ್ಷಿ ಎಂದರು.

5 ಸಾವಿರ ಕೋಟಿ ಹಗರಣದ ಆರೋಪಿಗಳಾದ ವರಿಷ್ಠರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ನಾಲ್ವರು ಮಾಜಿ ಮುಖ್ಯಮಂತ್ರಿಗಳು ಜೈಲಿನಲ್ಲಿದ್ದಾರೆ. ಪ್ರಭಾವಿಗಳು ಏನೂ ಮಾಡಿದರೂ ನಡೆಯುತ್ತೆ ಎಂಬ ಅಭಿಪ್ರಾಯ ಈಗ ಇಲ್ಲ ಎಂದು ಮೋದಿ ಹೇಳಿದರು.

ದೇಶದ ಅಭಿವೃದ್ಧಿ ವಿಷಯದಲ್ಲಿ ನಮ್ಮ ಸರಕಾರಕ್ಕೆ ಬದ್ಧತೆ ಇದೆ ಹೊರತು ಗೊಂದಲ ಇಲ್ಲ. ಆದರೆ ಕಾಂಗ್ರೆಸ್ ಸರಕಾರ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ. ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಬಡವರನ್ನು ವೋಟ್ ಬ್ಯಾಂಕ್ ಆಗಿ ಮಾಡಿಕೊಳ್ಳಲಾಗಿದೆ ಹೊರತು ಅಭಿವೃದ್ಧಿ ಮಾಡಲಿಲ್ಲ ಎಂದು ಮೋದಿ ಆರೋಪಿಸಿದರು.

Next Story

RELATED STORIES