Top

ಸಾಲಮನ್ನಾ ಕುರಿತು ಬುಧವಾರ ಅಧಿಕೃತ ಘೋಷಣೆ: ಕುಮಾರಸ್ವಾಮಿ

ಸಾಲಮನ್ನಾ ಕುರಿತು ಬೆಂಗಳೂರಿನಲ್ಲಿ ಬುಧವಾರ ಅಧಿಕೃತ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಂಪೂರ್ಣ ಸಾಲಮನ್ನಾ ಕುರಿತ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಸಮಸ್ತ ಕನ್ನಡಿಗರ ಹೆಸರಿನಲ್ಲಿ ನಾನು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಸಾಲಮನ್ನಾ ಕುರಿತು ಬಿಜೆಪಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದು, ಈ ಬಗ್ಗೆ ಬುಧವಾರ ತಮ್ಮ ನಿಲುವು ಪ್ರಕಟಿಸುತ್ತೇನೆ ಎಂದರು.

ಪಕ್ಷದ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಸಾಲಮನ್ನ ಮಾಡುತ್ತೇನೆ. ನನಗೆ ಉಸಿರಾಡಲು ಅವಕಾಶ ಕೊಡಿ. ನಾನು ಅಧಿಕಾರ ಸ್ವೀಕರಿಸಿದ ಪರಿಸ್ಥಿತಿ ಎಲ್ಲರಿಗೂ ಗೊತ್ತಿದೆ. ಸಾಲಮನ್ನಾ ಮಾಡದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಈ ಹಿಂದೆಯೇ ಸ್ಪಷ್ಟವಾಗಿ ತಿಳಿಸಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧವಾಗಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ಪ್ರಧಾನಿ ಅವರನ್ನು ಭೇಟಿ ಮಾಡಿ, ವಿದ್ಯುತ್​ ಉತ್ಪಾದನೆಗೆ ಕೇವಲ 2 ದಿನಗಳಷ್ಟು ಕಲ್ಲಿದಲ್ಲು ಸಂಗ್ರಹ ಇದೆ. ಹಾಗಾಗಿ ಕಲ್ಲಿದ್ದಲು ಪೂರೈಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದು, ಪ್ರಧಾನಿ ಮೋದಿ ಅವರು ಸಾಕಷ್ಟು ಸಲಹೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ವಿವರಿಸಿದರು.

Next Story

RELATED STORIES