Top

ಕಾಂಗ್ರೆಸ್​ ನಾಯಕರ ವರ್ತನೆಗೆ ಕುಮಾರಸ್ವಾಮಿ ಅಸಮಾಧಾನ?

ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ನಿಲುವು ಕೈಗೊಳ್ಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅಸಮಾಧಾನಗೊಂಡಿದ್ದು, ಮೈತ್ರಿ ಮುಂದುವರಿಯುವ ಬಗ್ಗೆ ಅನುಮಾನಗಳು ಉಂಟಾಗಿವೆ.

ಆಪ್ತರ ಬಳಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್​ನ ರಾಜ್ಯ ಮತ್ತು ದಿಲ್ಲಿ ನಾಯಕರ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಜೆಡಿಎಸ್ ಗೆ ಬೇಷರತ್ ಬೆಂಬಲ ಎಂದು ಘೋಷಿಸಿದ್ದ ಕಾಂಗ್ರೆಸ್, ಇದೀಗ ದಿನಕ್ಕೊಂದು ಷರತ್ತು ವಿಧಿಸುತ್ತಿದೆ. 34 ಸಚಿವ ಸಂಪುಟ ಸ್ಥಾನಗಳ ಪೈಕಿ ಈ ಹಿಂದೆ ಉಭಯ ಪಕ್ಷಗಳು ತಲಾ 17 ಸ್ಥಾನಗಳನ್ನು ಹಂಚಿಕೊಳ್ಳಲು ನಿರ್ಧಾರಿಸಲಾಗಿತ್ತು. ನಂತರ 22 ಸ್ಥಾನಗಳಿಗೆ ಒತ್ತಡ ಹೇರಿ, 12 ಸ್ಥಾನಗಳನ್ನು ಮಾತ್ರವೇ ಜೆಡಿಎಸ್ ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ.

ಇದೀಗ ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳೇ ಬೇಕು ಎಂದು ಜೆಡಿಎಸ್ ಮೇಲೆ ಕಾಂಗ್ರೆಸ್ ನಾಯಕರು ಒತ್ತಡ ಹಾಕುತ್ತಿದ್ದಾರೆ.

Next Story

RELATED STORIES