Top

ಕರ್ನಾಟಕದಲ್ಲಿ ರಜನಿಗೆ ಕೇಡು `ಕಾಲ'

ಕರ್ನಾಟಕದಲ್ಲಿ ರಜನಿಗೆ ಕೇಡು `ಕಾಲ
X

ಬಹುಭಾಷಾ ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಕಾಲಾ ಚಿತ್ರವನ್ನು ಕರ್ನಾಟಕದಲ್ಲಿ ನಿಷೇಧಿಸಿ ಕನ್ನಡ ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಪ್ರಕಟಿಸಿದ್ದಾರೆ. ಇದೇ ವೇಳೆ ಕಮಲ್ ಹಾಸನ್ ಅವರ ಚಿತ್ರಗಳನ್ನೂ ನಿಷೇಧಿಸಲು ತೀರ್ಮಾನಿಸಲಾಯಿತು.

ಸುಪ್ರೀಂಕೋರ್ಟ್​ ಆದೇಶದಂತೆ ಕರ್ನಾಟಕ ಕೂಡಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವಂತೆ ಇತ್ತೀಚೆಗೆ ರಜನಿಕಾಂತ್ ಹೇಳಿಕೆ ನೀಡಿದ್ದರು. ಅಲ್ಲದೇ ಕಾವೇರಿ ನದಿ ನೀರು ನಿರ್ವಹಣಾ ಮಡಳಿಗೆ ರಚನೆಗೆ ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ವಾಣಿಜ್ಯ ಮಂಡಳಿ ಸಭೆಯಲ್ಲಿ ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆ ಮಾಡದಂತೆ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಗೋವಿಂದು, ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಲ ಸಿನಿಮಾ ಜೂನ್ ೭ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈ ಸಂಬಂಧ ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ತುರ್ತು ಸಭೆ ಕರೆದಿತ್ತು.

ಬಿಡುಗಡೆ ಸಂಬಂಧ ವಿತರಕ ಮತ್ತು ಪ್ರದರ್ಶಕರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಹಲವು ವಿತರಕರು ಭಾಗಿಯಾಗಿದ್ದು, ಕಾಲಾ ಚಿತ್ರದ ವಿತರಕ ಸೌರಭ್, ಕರ್ನಾಟಕದ ಹಿತದೃಷ್ಟಿಯಿಂದ ವಿತರಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದರು.

Next Story

RELATED STORIES