ವಿಡಿಯೋ ಚಿತ್ರಿಸಿ ಆತ್ಮಹತ್ಯೆಗೆ ಶರಣಾದ ಯುವಕ

X
TV5 Kannada29 May 2018 6:20 AM GMT
ಚಿಕ್ಕಬಳ್ಳಾಪುರ: ಯುವಕನೋರ್ವ ವಿಷದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುನೀಲ್ ಕುಮಾರ್. ಜಿ(21) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಈತ ಕೆ.ಎಸ್.ಆರ್.ಪಿ ಪೇದೆಯಾಗಿ ತರಬೇತಿ ಪಡೆಯುತ್ತಿದ್ದು, ರಜೆಯ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಸಾವಿಗೂ ಮುನ್ನ ವಿಷದ ಮಾತ್ರೆಗಳನ್ನು ನುಂಗುವ ದೃಶ್ಯ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದಾನೆ.ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Next Story