ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

X
TV5 Kannada29 May 2018 5:45 AM GMT
ಬೆಳಗಾವಿ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಳೆಂದು ಆರೋಪಿಸಿ, ಮಹಿಳೆಯೋರ್ವಳನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಬೆಳವಟ್ಟಿ ಗ್ರಾಮದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದು, ರೇಷ್ಮಾ ಅಪ್ಟೇಕರ್(30) ಥಳಿತಕ್ಕೊಳಗಾದ ಮಹಿಳೆಯಾಗಿದ್ದಾಳೆ.ಇನ್ನು ಈ ದೌರ್ಜನ್ಯ ತಡೆಯಲು ಹೋದ ಪೊಲೀಸ್ ಪೇದೆ, ಭೀಮಶಿ ಮಾದರ ಮೇಲೂ ಕೂಡ ಗ್ರಾಮಸ್ಥರು ಹಲ್ಲೆ ನಡೆಸಿದ್ದು, ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ.ಅಲ್ಲದೇ ರಕ್ಷಣೆಗೆ ಬಂದ ಪೊಲೀಸ್ ವಾಹನದ ಮೇಲೂ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದು, ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆ ದಾಖಲಿಸಲಾಗಿದೆ.ಇನ್ನು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಬೆಳವಟ್ಟಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Next Story