Top

ರಾಮನಗರದಿಂದ ಮಧು ಬಂಗಾರಪ್ಪ ಸ್ಪರ್ಧೆ ಸಾಧ್ಯತೆ

ರಾಮನಗರದಿಂದ ಮಧು ಬಂಗಾರಪ್ಪ ಸ್ಪರ್ಧೆ ಸಾಧ್ಯತೆ
X

[story-lines]

ರಾಮನಗರ: ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧುಬಂಗಾರಪ್ಪ ಸ್ಪರ್ಧಿಸುವ ಸಾಧ್ಯತೆ ಇದೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಹೊಂದಾಣಿಕೆಯಾಗಿ ಏಕೈಕ ಅಭ್ಯರ್ಥಿ ನಿಲ್ಲಿಸುವ ಇಂಗಿತ ವ್ಯಕ್ತವಾಗಿದ್ದು, ಈಗಾಗಲೇ ಅಭ್ಯರ್ಥಿಯಾಗುವ ಬಗ್ಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಲಾಗಿದೆ. ಇಬ್ಬರು ಮುಖಂಡರು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆನ್ನಲಾಗಿದೆ.

ರಾಮನಗರ ಹಾಗೂ ಚನ್ನಪಟ್ಟಣ ಎರಡು ಕ್ಷೇತ್ರದಿಂದ ಸಿಎಂ‌ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಇನ್ನು 6 ತಿಂಗಳೊಳಗೆ ರಾಮನಗರ ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆಯಲಿದೆ. ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಮಧು ಬಂಗಾರಪ್ಪ ಸೋತಿದ್ದು, ಮಧುಬಂಗಾರಪ್ಪರನ್ನ ಗೆಲ್ಲಿಸಿ ಶಿವಮೊಗ್ಗ ಜಿಲ್ಲೆ‌ ಉಸ್ತುವಾರಿ ನೀಡುವ ಸಾಧ್ಯತೆ ಇದೆ.

Next Story

RELATED STORIES