Top

ಕಾಂಗ್ರೆಸ್​ ಹಿರಿಯರಿಗಿಲ್ಲ ಸಚಿವ ಸ್ಥಾನದ ಭಾಗ್ಯ?

ಕಾಂಗ್ರೆಸ್​ ಹಿರಿಯರಿಗಿಲ್ಲ ಸಚಿವ ಸ್ಥಾನದ ಭಾಗ್ಯ?
X

ಎರಡಕ್ಕಿಂತ ಹೆಚ್ಚು ಬಾರಿ ಸಚಿವರಾದವರಿಗೆ ಈ ಭಾರಿ ಸ್ಥಾನ ದೊರೆಯುವುದು ಅನುಮಾನ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಸಚಿವರಾದವರಿಗೆ ಸಚಿವ ಸ್ಥಾನ ನೀಡದಂತೆ ಸೇರಿದಂತೆ ಹಲವು ಸಲಹೆಗಳು ಬಂದಿವೆ. ಅದನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದರು.

ಮುಖಂಡರ ಅಭಿಪ್ರಾಯವನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಅಂತಿಮ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಪರಮೇಶ್ವರ್ ಹಿರಿಯರಿಗೆ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಮುನ್ಸೂಚನೆ ನೀಡಿದ್ದಾರೆ.

Next Story

RELATED STORIES