Top

ಸಂಪುಟ ವಿಸ್ತರಣೆ ಬೆನ್ನಲೇ ಭಿನ್ನಮತ ಸ್ಫೋಟ

ಸಂಪುಟ ವಿಸ್ತರಣೆ ಬೆನ್ನಲೇ ಭಿನ್ನಮತ ಸ್ಫೋಟ
X

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರದ ಮೊದಲ ಹಂತದ ಸಂಪುಟ ವಿಸ್ತರಣೆ ಆಗುತ್ತಿದ್ದಂತೆ ಕಾಂಗ್ರೆಸ್​ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

[story-lines]

ಹಿರಿಯ ಮುಖಂಡರಾದ ಶ್ಯಾಮನೂರ್ ಶಿವಶಂಕರಪ್ಪ, ಎಂ.ಬಿ. ಪಾಟೀಲ್​, ಭದ್ರತಾವತಿ ಶಾಸಕ ಬಿ.ಕೆ. ಸಂಗಮೇಶ್, ಎಂ.ಟಿ.ಬಿ. ನಾಗರಾಜ್​ ಮುಂತಾದವರು ಸಚಿವ ಸ್ಥಾನ ಸಿಗದೇ ಇದ್ದಿದ್ದಕ್ಕೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಶ್ಯಾಮನೂರು ಶಿವಶಂಕರಪ್ಪ ಸಂಜೆ ಅಖಿಲ ಭಾರತ ವೀರಶೈವ ಮಹಾಸಭಾದ ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಕಳೆದ ಸರಕಾರದಲ್ಲಿ ನೀರಾವರಿ ಸಚಿವ ಸ್ಥಾನ ಹೊಂದಿದ್ದ ಎಂ.ಬಿ. ಪಾಟೀಲ್​ ಮಧ್ಯಮಗಳ ಮುಂದೆ ಬಹಿರಂಗವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನ ಇರಲಿ, ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಾನು ಖಾತೆ ಕೊಟ್ಟರೂ ವಹಿಸಿಕೊಳ್ಳುವುದಿಲ್ಲ ಎಂದು ಗುಡುಗಿದ್ದಾರೆ.

ಭದ್ರಾವತಿ ಶಾಸಕ ಸಂಗಮೇಶ್, ಸಚಿವ ಸ್ಥಾನ ನೀಡದೇ ಇದ್ದರೆ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದರೆ, ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ಸಲ್ಲಿಸಿದರು.

Next Story

RELATED STORIES