Top

ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನದಲ್ಲಿ ರೈತರ ಸಾಲಮನ್ನಾ: ರಾಹುಲ್‌ ಘೋಷಣೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನದಲ್ಲಿ ರೈತರ ಸಾಲಮನ್ನಾ: ರಾಹುಲ್‌ ಘೋಷಣೆ
X

ಮಧ್ಯಪ್ರದೇಶ : ಕಾಂಗ್ರೆಸ್‌ ಸರ್ಕಾರ ಕಳೆದ ಹಲವು ವರ್ಷಗಳಿಂದ ಮೂಲೆಗುಂಪಾಗುತ್ತಿದೆ. ಕೇಸರಿ ಆಡಳಿತ ದೇಶದ ಉದ್ದಗಲಕ್ಕೂ ವ್ಯಾಪಿಸುತ್ತಿದೆ. ಈ ನಡುವೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ರೇ, ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಧ್ಯಪ್ರದೇಶದ ಮಂಡಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕು, ಸರ್ಕಾರ ರಚನೆಯಾದರೇ, 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡಲಾಗುವುದು. ಜೊತೆಗೆ ರೈತರಿಗೆ ಬೆಂಬಲ ಬೆಲೆ ನೀಡುವುದು ಕುರಿತಂತೆ ಎಲ್ಲಾ ರೀತಿಯ ರೈತರ ಪರ ಕಾಳಜಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿಯ ವಿರುದ್ಧ ಹರಿಹಾಯ್ದ ಯುವನಾಯಕ, ಪ್ರಧಾನಿ ನರೇಂದ್ರ ಮೋದಿಗೆ ರೈತರ ಮೇಲೆ ಕಾಳಜಿ ಇಲ್ಲ. ಅವರದ್ದು ಏನಿದ್ದರೂ ಉದ್ಯಮಿಗಳು, ಕಾರ್ಪೊರೇಟ್‌ ವಲಯಗಳಿಗೆ ಅನುಕೂಲ ಕಲ್ಪಿಸಿಕೊಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಪ್ರಧಾನಿ ಮೋದಿ 15 ಉದ್ಯಮಿಗಳ 1.5 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ. ಆದೇ ರೈತರ ಸಾಲ ಮನ್ನಾ ವಿಚಾರ ಎತ್ತಿದರೇ ಸಾಕು ಪ್ರಧಾನಿ ಸುಮ್ಮನಾಗುತ್ತಾರೆ ಎಂದು ವಾಗ್ಧಾಳಿ ನಡೆಸಿದರು.

Next Story

RELATED STORIES