ಟುಸ್ಸಾಡ್ ಮ್ಯೂಸಿಯಂನಲ್ಲಿ ಕೊಹ್ಲಿ ಮೇಣದ ಪ್ರತಿಮೆ

X
TV5 Kannada6 Jun 2018 9:57 AM GMT
ನವದೆಹಲಿ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆ ಇಂದು ದೆಹಲಿಯ ಮ್ಯಾಡಮ್ ಟುಸ್ಸಾಡ್ ಮ್ಯೂಸಿಯಂನಲ್ಲಿ ಅನಾವರಣಗೊಳ್ಳಲಿದೆ.ಮೈದಾನದಲ್ಲಿ ರನ್ ಮಳೆಯನ್ನ ಹರಿಸುತ್ತಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ಗೆ ಹೋಲಿಸಲಾಗುತ್ತಿದೆ. ಇದೀಗ ಟೀಂ ಇಂಡಿಯಾ ನಾಯಕನಾಗಿರುವ ಕೊಹ್ಲಿಯ ಮೇಣದ ಪ್ರತಿಮೆಯನ್ನ ಮ್ಯಾಡಮ್ ಟುಸ್ಸಾಡ್ಸ್ ಮ್ಯೂಸಿಯಂ ತಯಾರು ಮಾಡಿದ್ದು, ಕಪಿಲ್ ದೇವ್, ಸಚಿನ್ ತೆಂಡೂಲ್ಕರ್ ಪ್ರತಿಮೆ ಪಕ್ಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ನಿಲ್ಲಲಿದ್ದಾರೆ. ಈ ಬಗ್ಗೆ ಟ್ವೀಟರ್ ಮೂಲಕ ವಿರಾಟ್ ಕೊಹ್ಲಿ ಮಾಹಿತಿ ನೀಡಿದ್ದು, ತಮ್ಮ ಸಂತಸವನ್ನ ವ್ಯಕ್ತಪಡಿಸಿದ್ದಾರೆ.
Next Story