ಏಷ್ಯಾ ಟಿ20: ಬಾಂಗ್ಲಾ ವಿರುದ್ಧ ಭಾರತಕ್ಕೆ ಸೋಲು

X
TV5 Kannada7 Jun 2018 6:24 AM GMT
ಕೌಲಾಲಂಪುರ: ಮಹಿಳಾ ಏಷ್ಯಾ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ವನಿತೆಯರ ತಂಡ ಬಾಂಗ್ಲಾ ವಿರುದ್ಧ 7 ವಿಕೆಟ್ಗಳ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು.ರೂಮಾನಾ ಅಹ್ಮದ್ ದಾಳಿಗೆ ಭಾರತೀಯ ಬ್ಯಾಟ್ಸ್ಮನ್ಗಳು ತತ್ತರಿಸಿದ್ರು.
ನಾಯಕಿ ಹರ್ಮನ್ಪ್ರೀತ್ ಕೌರ್ 42, ದೀಪ್ತಿ ಶರ್ಮಾ 32 ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ್ರು. 142 ರನ್ಗಳ ಟಾರ್ಗೆಟ್ ಬೆನ್ನತ್ತಿದ ಬಾಂಗ್ಲಾ ತಂಡ ಫಾರ್ಗಾನಾ ಹಕ್ ಅವರ ಅಜೇಯ 52 ರನ್ಗಳ ನೆರವಿನಿಂದ ತಂಡವನ್ನ ಗೆಲುವಿನ ದಡ ಸೇರಿಸಿದ್ರು. ಬಾಂಗ್ಲಾ 19.4 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 142 ರನ್ ಗಳಿಸು ಸುಲಭ ಗೆಲುವು ಪಡೆಯಿತು. ಸತತ ಎರಡು ಪಂದ್ಯಗಳನ್ನ ಗೆದ್ದಿದ್ದ ಭಾರತ ಮೂರನೇ ಪಂದ್ಯದಲ್ಲಿ ಸೋಲು ಕಂಡಿತು.
Next Story