Top

ಪೆಟ್ರೋಲ್​, ಡೀಸೆಲ್​ ಸತತ 10ನೇ ದಿನವೂ ದರ ಕಡಿತ, ಎಷ್ಟು ಗೊತ್ತಾ?

ಪೆಟ್ರೋಲ್​, ಡೀಸೆಲ್​ ಸತತ 10ನೇ ದಿನವೂ ದರ ಕಡಿತ, ಎಷ್ಟು ಗೊತ್ತಾ?
X

ತೀವ್ರ ಟೀಕೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್​ ದರದಲ್ಲಿ ಕಡಿತ ಮಾಡಲಾಗಿದೆ. ಈ ಬಾರಿ ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್ ಬೆಲೆಯಲ್ಲಿ ಲೀಟರ್​ಗೆ 25 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ ಲೀಟರ್​ಗೆ 15 ಪೈಸೆ ಇಳಿಕೆ ಮಾಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸತತ ಏರಿಕೆ ಮಾಡಲಾಗಿತ್ತು. ಇದರಿಂದ ದೇಶದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಂಪನಿಗಳು ಅತ್ಯಂತ ಸಣ್ಣ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡುತ್ತಾ ಬರುತ್ತಿವೆ.

ಇದೀಗ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 77.42 ರೂ. ಇದ್ದರೆ, ಡೀಸೆಲ್​ ಬೆಲೆ 68.58 ರೂ. ಇದೆ. ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೆಂದ್ರ ಪ್ರಧಾನ್ ಇಂಧನ ದರ ಇಳಿಕೆಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ ನಂತರ ಹಂತ ಹಂತವಾಗಿ ಇಳಿಕೆಯಾಗುತ್ತಿದೆ.

Next Story

RELATED STORIES