Top

ಮಾಜಿ ಪ್ರಧಾನಿ ವಾಜಪೇಯಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ವಾಜಪೇಯಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
X

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಎಐಐಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಯಾವುದೇ ಆತಂಕ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

93 ವರ್ಷದ ವಾಜಪೇಯಿ ಅವರು ಕಳೆದ ಕೆಲವು ವರ್ಷಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯೋಸಹಜ ಅಸ್ವಸ್ಥರಾಗಿದ್ದು, ಸಾಮಾನ್ಯ ವೈದ್ಯಕೀಯ ತಪಾಸಣೆ ನಡೆಯಿತು ಎಂದು ವೈದ್ಯರು ತಿಳಿಸಿದ್ದಾರೆ.

ವಾಜಪೇಯಿ ಕೇಂದ್ರದಲ್ಲಿ ಐದು ವರ್ಷ ಆಡಳಿತ ಪೂರೈಸಿದ ಕಾಂಗ್ರೆಸ್ಸೇತರ ಮೊದಲ ಸರಕಾರದ ನೇತೃತ್ವ ವಹಿಸಿದವರು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 2015ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Next Story

RELATED STORIES