ಕಂಪನಿಯ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

X
TV5 Kannada11 Jun 2018 2:48 PM GMT
ಬೆಂಗಳೂರು : ಟೆಕ್ಕಿಯೊಬ್ಬ ಕಂಪನಿಯ ಕಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವೈಟ್ ಫೀಲ್ಢ್ ಪೊಲೀಸ್ ಠಾಣಾ ವ್ಯಾಪ್ತಿಯ ಐಟಿಪಿಎಲ್ ಆವರಣದಲ್ಲಿ ನಡೆದಿದೆ..23ವರ್ಷದ ಭವೇಶ್ ಜೈಸ್ವಾಲ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಈತ ಐಟಿಪಿಎಲ್ ಆವರಣದಲ್ಲಿರುವ ಎಮ್.ಯು.ಸಿಗ್ಮಾ ಎನ್ನುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.. ಇಂದು ಸಂಜೆ 4ಗಂಟೆ ಸುಮಾರಿಗೆ ಏಕಾಏಕಿ ಕಟ್ಟಡದ 12ನೇ ಮಹಡಿ ಕಿಟಿಕಿಯ ಗ್ಲಾಸ್ ಒಡೆದು ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಭವೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದು, ಕೆಲ ಕಾಲ ಕಚೇರಿ ಆವರಣ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ತಕ್ಷಣ ಸ್ಥಳಕ್ಕೆ ಬಂದ ವೈಟ್ ಫೀಲ್ಢ್ ಪೊಲೀಸರು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣ ಇದುವರೆಗೂ ತಿಳಿದು ಬಂದಿಲ್ಲ. ಸದ್ಯ ಮೃತದೇಹವನ್ನ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ವೈಟ್ ಫೀಲ್ಡ್ ಪೊಲೀಸರು ತನಿಖೆ. ಮುಂದುವರೆಸಿದ್ದಾರೆ.
Next Story