ಚಾಲೆಂಜಿಂಗ್ ಸ್ಟಾರ್ ಗರಂ ಆಗಿದ್ದೇಕೆ..?

X
TV5 Kannada13 Jun 2018 11:32 AM GMT
ನಿನ್ನೆ ತಾನೇ ಸೋಶಿಯಲ್ ಮಿಡಿಯಾದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿತ್ತು. ನಟ ದರ್ಶನ್ ಹೆಸರಿನಲ್ಲಿರುವ ಫೇಸ್ಬುಕ್ ಖಾತೆಯಿಂದ ಹೆಚ್ಡಿಕೆ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿತ್ತು. ಇದರ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿರುವ ನಟ ದರ್ಶನ್, ಸೋಷಿಯಲ್ ಮಿಡಿಯಾ ದುರ್ಬಳಕೆ ಮಾಡಿರುವ ಬಗ್ಗೆ ಗರಂ ಆಗಿದ್ದಾರೆ.
ನನ್ನ ಹೆಸರಿನಲ್ಲಿ ನಕಲಿ ಖಾತೆಗಳಿದ್ದು, ಅವುಗಳಲ್ಲಿ ಕೆಲವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಸೈಬರ್ ಕ್ರೈಂ ಪೊಲೀಸರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.ದಯಮಾಡಿ ಯಾರೂ ಇಂತಹ ಕೆಲಸಗಳಲ್ಲಿ ತೊಡಗಬೇಡಿ ಎಂದು ವಿನಂತಿ ಮಾಡಿದ್ದಾರೆ.
Next Story