ಧೋನಿ, ವಿರಾಟ್ ಕೊಹ್ಲಿಗೆ ಫಿಟ್ನೆಸ್ ಪರೀಕ್ಷೆ

X
TV5 Kannada15 Jun 2018 9:16 AM GMT
ಬೆಂಗಳೂರು : ಮುಂಬರುವ ಇಂಗ್ಲೆಂಡ್ ಸರಣಿಗೆ ಆಯ್ಕೆ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಿಸ್ಟರ್ ಕೂಲ್ ಎಂ.ಎಸ್. ಧೋನಿ ಇಲ್ಲಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ಯೊ ಯೊ ಪರೀಕ್ಷೆಗೆ ಒಳಪಟ್ಟರು.
ಸದ್ಯ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವೆ ಐತಿಹಾಸಿಕ ಟೆಸ್ಟ್ ಪಂದ್ಯ ನಡೆಯುತ್ತಿದೆ. ಇದರ ಬೆನ್ನಲ್ಲೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ , ಎಂ.ಎಸ್.ಧೋನಿ, ಸುರೇಶ್ ರೈನಾ, ಕೇದಾರ್ ಜಾಧವ್ ಮತ್ತು ಭುವನೇಶ್ವರ್ ಕುಮಾರ್ ತಮ್ಮ ಫಿಟ್ನೆಸ್ ಸಾಬೀತು ಪಡಿಸಲು ಯೊ ಯೊ ಟೆಸ್ಟ್ ಗೆ ಒಳಪಟ್ಟಿದ್ದಾರೆ. ಟೀಂ ಇಂಡಿಯಾದಲ್ಲಿ ಆಡಬೇಕಿದ್ದಲ್ಲಿ ಪ್ರತಿಯೊಬ್ಬ ಆಟಗಾರನೂ 16.1 ಅಂಕ ಪಡೆಯಲೇ ಬೇಕು
Next Story