Top

ಸಾಲಮನ್ನಗೆ ಶೇ.50ರಷ್ಟು ಕೇಂದ್ರದ ನೆರವು ಅಗತ್ಯ: ಕುಮಾರಸ್ವಾಮಿ

ಸಾಲಮನ್ನಗೆ ಶೇ.50ರಷ್ಟು ಕೇಂದ್ರದ ನೆರವು ಅಗತ್ಯ: ಕುಮಾರಸ್ವಾಮಿ
X

ರಾಜಕೀಯ ಮತ್ತು ಸೈದ್ದಾಂತಿಕ ವಿರೋಧಗಳ ನಡುವೆಯೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ. ಕೇಂದ್ರ ಸರಕಾರ ನೆರವು ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಂಪೂರ್ಣ ಸಹಕಾರ ನೀಡಬೇಕಿದೆ. ರೈತರ ಸಾಲಮನ್ನಗೆ ಕೇಂದ್ರ ಸರಕಾರ ಶೇ.50ರಷ್ಟು ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

[story-lines]

ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ರಾಜ್ಯದ ರೈತರ ಸಮಸ್ಯೆಯನ್ನು ಪ್ರಸ್ತಾಪಿಸಿದ ಅವರು, ರೈತರ ಸಾಲಮನ್ನಕ್ಕಾಗಿ ನಮ್ಮ ಸರಕಾರ ಪಣತೊಟ್ಟಿದೆ. ಸಾಲಮನ್ನಾ ವಿಚಾರವಾಗಿ ನೆರವು ಅಗತ್ಯ. ರಾಜ್ಯದಲ್ಲಿ 85 ಲಕ್ಷ ರೈತರು ಸಾಲ ಪಡೆದಿದ್ದಾರೆ. ರಾಜ್ಯದ ಸಾಲಮನ್ನ ಯೋಜನೆಗೆ 50% ಕೇಂದ್ರ ನೆರವು ಅಗತ್ಯವಿದೆ ಎಂದರು.

ಕಳೆದ 16 ವರ್ಷಗಳಲ್ಲಿ 13 ಬರಗಾಲ ಎದುರಿಸಿದ್ದೇವೆ. ಪ್ರಾಕೃತಿಕ ವಿಕೋಪಗಳನ್ನು ಗಮನದಲ್ಲಿರಿಸಿ ನೀತಿ ರಚಿಸಬೇಕಿದೆ. ಜಲ ಸಂರಕ್ಷರಣೆ ಉತ್ತೇಜಿಸುವ ಕೆಲಸ ನೀತಿ ಆಯೋಗ ಮಾಡಬೇಕಿದೆ. ರಾಜ್ಯದಲ್ಲಿ ನೀರಿನ ಸಮಸ್ಯೆ ನೀಗಿಸಲು ಕೆರೆ ಸಂಜೀವಿನಿ ಯೋಜನೆ ಹಮ್ಮಿಕೊಂಡಿದ್ದೇವೆ. ಜಲ ದಶಕ ಎಂದು ಪರಿಗಣಿಸಿ ಸಂರಕ್ಷಣೆಗೆ ಪಣತೊಡಬೇಕಿದೆ ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

ಕೇಂದ್ರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ್ಧೆವೆ. ಹಿಂದುಳಿದ ಜಿಲ್ಲೆಗಳಿಗೆ ನೂರು ಕೋಟಿ ಕೇಂದ್ರದ ಅನುದಾನ ಅಗತ್ಯವಿದೆ. ಎನ್ ಡಿ ಆರ್ ಎಫ್ ಅನುದಾನದಲ್ಲಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಬೇಕಿದೆ. ಪ್ರಾಕೃತಿಕ ವಿಕೋಪದಿಂದ ನಾಲ್ಕು ವರ್ಷದಲ್ಲಿ ರಾಜ್ಯಕ್ಕೆ 70 ಸಾವಿರಕೋಟಿ ನಷ್ಟವಾಗಿದ್ದು, 20 ಸಾವಿರ ಕೋಟಿ ಪರಿಹಾರ ನೀಡುವ ಭರವಸೆ ನೀಡಿದ್ದ ಕೇಂದ್ರ, ಕೇವಲ 5 ಸಾವಿರ ಕೋಟಿಯಷ್ಟೇ ಬಿಡುಗಡೆ ಮಾಡಿದೆ ಎಂದು ಅವರು ಆರೋಪಿಸಿದರು.

Next Story

RELATED STORIES