ಮಗನ ಜನ್ಮದಿನಕ್ಕೆ ಕುಸ್ತಿ ಟೀಸರ್ ಬಿಡುಗಡೆ

X
TV5 Kannada17 Jun 2018 10:07 AM GMT
ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡುತ್ತಿರುವ ಪುತ್ರ ಸಾಮ್ರಾಟ್ ಅವರ ಜನ್ಮ ದಿನದ ಅಂಗವಾಗಿ ಕುಸ್ತಿ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ.
ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿಜಯ್ ಅಭಿನಯದ ಕುಸ್ತಿ ಚಿತ್ರದ ಟೀಸರ್ ಅನ್ನು ಭಾನುವಾರ ಬಿಡುಗಡೆ ಮಾಡಲಾಯಿತು.
ಸಾಮ್ರಾಟ್ ಕುಸ್ತಿ ಚಿತ್ರದಲ್ಲಿ ಕುಸ್ತಿಪಟುವಾಗಿ ಕಾಣಿಸಿಕೊಳ್ಳುತ್ತಿದ್ದು, ಇದಕ್ಕಾಗಿ ಸಾಕಷ್ಟು ಕಸರತ್ತು ಕೂಡ ಮಾಡಿದ್ದಾನೆ. ದುನಿಯಾ ವಿಜಯ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ರಘು ಶಿವಮೊಗ್ಗ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಸಾಮ್ರಾಟ್ ತಂದೆ ಉಸ್ತಾದ್ ಪಾತ್ರದಲ್ಲಿ ದುನಿಯಾ ವಿಜಯ್ ಕಾಣಿಸಿಕೊಳ್ಳುತ್ತಿದ್ದಾರೆ.
Next Story