Top

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಆಮ್​ ಆದ್ಮಿ ಸಚಿವ ಆಸ್ಪತ್ರೆಗೆ

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಆಮ್​ ಆದ್ಮಿ ಸಚಿವ ಆಸ್ಪತ್ರೆಗೆ
X

ಕಳೆದ ಮಂಗಳವಾರದಿಂದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ ನಿವಾಸದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಚಿವರ ಪೈಕಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತ್ಯೇಂದ್ರ ಜೈನ್ ನಿತ್ರಾಣರಾಗಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ನಿವಾಸದ ಬಳಿಯೇ ಇದ್ದ ಆ್ಯಂಬುಲೆನ್ಸ್​ನಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ನಡೆಸಿದ ವೈದ್ಯರು ಉಪವಾಸ ಸತ್ಯಾಗ್ರಹ ನಂತರ ಜೈನ್ ಅವರ ತೂಕ 4 ಕೆಜಿಯಷ್ಟು ಇಳಿದಿದೆ. ಇದರಿಂದ ಅಸ್ವಸ್ಥರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಆಮ್ ಆದ್ಮಿ ಪಕ್ಷ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ ನಂತರ ಟ್ವೀಟ್ ಮಾಡಿದ್ದ ಕೇಜ್ರಿವಾಲ್, ಅವರು ಬದುಕಬೇಕಾದರೆ ಈ ರೀತಿಯ ಹೇಳಿಕೆ ನೀಡಲೇಬೇಕು ಎಂದಿದ್ದರು. ಅಲ್ಲದೇ ಕೇಂದ್ರ ಸರಕಾರ ಹಸ್ತಕ್ಷೇಪ ನಿಲ್ಲಿಸುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.

Next Story

RELATED STORIES