Top

ಬಂಡುಕೋರರ ದಾಳಿಗೆ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಹುತಾತ್ಮ

ಬಂಡುಕೋರರ ದಾಳಿಗೆ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಹುತಾತ್ಮ
X

ಬಂಡುಕೋರರು ನಡೆಸಿದ ದಾಳಿಯಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಹುತಾತ್ಮರಾಗಿ ನಾಲ್ವರು ಗಾಯಗೊಂಡಿರುವ ಘಟನೆ ನಾಗಾಲ್ಯಾಂಡ್​ನ ಮೊನ್ ಜಿಲ್ಲೆಯಲ್ಲಿ ಜರುಗಿದೆ.

ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ 6 ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ಓಬಿ ವ್ಯಾನ್​ ಸುತ್ತುವರಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಸ್ಸಾಂ ರೈಫಲ್ಸ್​ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ಹೊಣೆಯನ್ನು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ (ಎನ್​ಎಸ್​ಸಿಎನ್) ಸಂಘಟನೆ ಹೊತ್ತುಕೊಂಡಿದೆ. ಘಟನೆಯಲ್ಲಿ ಹಲ್ವಿಂದರ್ ಫತೇಹ್ ಸಿಂಗ್ ನೇಗಿ ಮತ್ತು ಸೆಪೊಯಿ ಹುಂಗ್ನಾ ಕೊನ್ಯಾಕ್ ಮೃತಪಟ್ಟ ದುರ್ದೈವಿಗಳು.

Next Story

RELATED STORIES