Top

ಬಜೆಟ್‌ ಮಂಡನೆಗೆ ಸಿದ್ದು ವಿರೋಧ : ಕಾಂಗ್ರೆಸ್‌ ಅಧ್ಯಕ್ಷರಿಗೆ ಡಿಸಿಎಂ ದೂರು.?

ಬಜೆಟ್‌ ಮಂಡನೆಗೆ ಸಿದ್ದು ವಿರೋಧ : ಕಾಂಗ್ರೆಸ್‌ ಅಧ್ಯಕ್ಷರಿಗೆ ಡಿಸಿಎಂ ದೂರು.?
X

ನವದೆಹಲಿ : ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ರಾಹುಲ್‌ ಗಾಂಧಿ ಭೇಟಿಯ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೂಡ ದೆಹಲಿಗೆ ತೆರಳಿ ಭೇಟಿ ಮಾಡುತ್ತಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇಂದು ದೆಹಲಿಗೆ ತೆರಳಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯಲ್ಲಿ ಸುಂಪುಟ ವಿಸ್ತರಣೆ, ಸಮ್ಮಿಶ್ರ ಸರ್ಕಾರದ ಪ್ರತ್ಯೇಕ ಬಜೆಟ್‌ ಮಂಡನೆ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ.

[story-lines]

ಕಳೆದ ನಿನ್ನೆಯಷ್ಟೇ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ರಾಹುಲ್‌ ಗಾಂಧಿ ಭೇಟಿಯ ಬಳಿಕ ಉಪಮುಖ್ಯಮಂತ್ರಿ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೇ ಬಜೆಟ್‌ ಮಂಡಿಸಬೇಕು ಎಂದು ಕುಮಾರಸ್ವಾಮಿ ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ್ದ ಬೆನ್ನಲ್ಲೇ, ಇದೇ ವಿಚಾರಕ್ಕೆ ಹೆಚ್ಚಿನ ಚರ್ಚೆಗಾಗಿ ಪರಮೇಶ್ವರ್‌ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.

ಅಂದಹಾಗೇ ರಾಹುಲ್‌ ಗಾಂಧಿ ಭೇಟಿ ಮಾಡಲಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಮ್ಮಿಶ್ರ ಸರ್ಕಾರ ಮಂಡಿಸಲು ಹೊರಟಿರುವ ಬಜೆಟ್‌ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಬಜೆಟ್‌ ಮಂಡನೆಯ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆಯೂ ಮನವರಿಕೆ ಮಾಡಿಕೊಡಲಾಗುತ್ತಿದೆ. ಈ ಮೂಲಕ ರಾಜ್ಯ ರಾಜಕಾರಣ, ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಸಮ್ಮಿಶ್ರ ಸರ್ಕಾರದ ನೂತನ ಬಜೆಟ್‌ ಮಂಡನೆ ಕೆಲವೇ ದಿನಗಳಲ್ಲಿ ಮಂಡನೆ ಆಗಲಿದೆ ಎಂಬುದಕ್ಕೆ ಸೂಚನೆ ದೊರೆತಂತಾಗಿದೆ.

Next Story

RELATED STORIES