ಸಿದ್ದಗಂಗಾಶ್ರೀ ಆಸ್ಪತ್ರೆಯಿಂದ ಬಿಡುಗಡೆ: ನಡದೇ ಮಠಕ್ಕೆ ವಾಪಸ್

X
TV5 Kannada21 Jun 2018 3:05 PM GMT
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಗುರುವಾರ ಸಾಯಂಕಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ನಡೆದುಕೊಂಡೇ ಮಠಕ್ಕೆ ಮರಳುವ ಮೂಲಕ ಮತ್ತೊಮ್ಮೆ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದರು.
ಶತಾಯುಷಿ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಮತ್ತೊಮ್ಮೆ ಯಶಸ್ವಿ ಚಿಕಿತ್ಸೆ ನೀಡಲಾಗಿದ್ದು, ನಿರೀಕ್ಷೆಗೂ ಮೀರಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆಯಿಂದ ಸಂಜೆ ಬಿಡುಗಡೆ ಮಾಡಲಾಯಿತು. ಪಿತ್ತಕೋಶದಲ್ಲಿ ಅಳವಡಿಸಿದ್ದ ಸ್ಟಂಟ್ ಬ್ಲಾಕ್ ನಲ್ಲಿ ತೊಂದರೆ ಕಾಣಿಸಿಕೊಂಡಿದ್ದು, ವೈದ್ಯರು ಎಂಡೋಸ್ಕೋಪಿ ಮೂಲಕ ಸ್ವಚ್ಛಗೊಳಿಸಿದರು.
Next Story