ಅಂಬೇಡ್ಕರ್ ಭಾವಚಿತ್ರ ಹರಿದು ಅವಮಾನಿಸಿದ ಕಿಡಿಗೇಡಿಗಳು

X
TV5 Kannada22 Jun 2018 8:36 AM GMT
ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ಅಂಬೇಡ್ಕರ್ ಪೋಟೋ ಹರಿದು ಅವಮಾನ ಮಾಡಿರುವುದು ಬೆಳಕಿಗೆ ಬಂದಿದೆ.
ಹೋತಪೇಟೆ ಗ್ರಾಮದ ಹೋರವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪೋಟೋ ಹರಿದು ಕಿಡಗೇಡಿಗಳ ದುಷ್ಕೃತ್ಯವೆಸಿಗಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ ದಲಿತ ಸಂಘಟನೆ ಕಾರ್ಯಕರ್ತರು ಹಾಗೂ ಸಮುದಾಯದ ಜನ್ರು ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಅಂದಹಾಗೇ, ಕಳೆದ ನಿನ್ನೆ ರಾತ್ರಿ ಹೀಗೆ ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರ ಹರಿದು ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹಾಪುರದ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಯಲ್ಲಿ ಪೊಲೀಸರು ನಿರತರಾಗಿದ್ದಾರೆ.
Next Story