Top

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮೇಲೆ ಅಮಿತ್ ಷಾ ಕಣ್ಣು.?

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ, ಕರ್ನಾಟಕದ ರಾಜಕಾರಣದಲ್ಲಿ ಚುರುಕು ಪಡೆಯುತ್ತಿದೆ. ಹೆಚ್ಚು ಸ್ಥಾನಗಳನ್ನು ಪಡೆದರೂ ಅಧಿಕಾರಕ್ಕೆ ಬರದ ಬಿಜೆಪಿ, ಲೋಕಸಭಾ ಚುನಾವಣೆಯ ಮೇಲೆ ಈಗಿನಿದಂಲೇ ಹದ್ದಿನ ಕಣ್ಣು ನೆಟ್ಟಿದೆ. ಈ ಮೂಲಕ ಹೆಚ್ಚು ಸ್ಥಾನಗಳನ್ನು ಲೋಕಸಭೆಯಲ್ಲಿ ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ರೆಡಿ ಮಾಡಿಕೊಂಡಿದೆ.

ಈ ನಡುವೆ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ವರಿಷ್ಠ, ಚಾಣಕ್ಯನೆಂದೇ ಪ್ರಸಿದ್ದಿ ಗಳಿಸಿರುವ ಅಮಿತ್ ಷಾ ಹದ್ದಿನ ಕಣ್ಣು ನೆಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಷಾ ಸೂಚನೆ ಕೂಡ ನೀಡಿದ್ದು, ಅಮಿತ್ ಷಾ ಸೂಚನೆ ಹಿನ್ನಲೆ, ಈಗಿನಿಂದಲೇ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ, ಜಾಗೃತರಾಗಿ ಕಾರ್ಯ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗೇ, ಅಮಿತ್ ಷಾ ಸೂಚನೆಯಂತೆ, ಅಗಸ್ಟ್ ತಿಂಗಳಲ್ಲಿ ಬಿಜೆಪಿ ಜಿಲ್ಲಾ ವಿಶೇಷ ಸಭೆಗಳನ್ನು ನಡೆಸಲಿರುವ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಭೆಗಳಲ್ಲಿ ಆಯಾ ಜಿಲ್ಲೆಯ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು, ಜಿಲ್ಲಾದ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು,ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಯಡಿಯೂರಪ್ಪ ನಡೆಸುವ ಈ ಸಭೆಯಲ್ಲಿ, ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಅಲ್ಲದೇ, ಕಾಂಗ್ರೆಸ್ - ಜೆಡಿಎಸ್ ಮೈತ್ರಿ ವಿರುದ್ದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಬಗೆ ಹೇಗೆ? ತಳ ಮಟ್ಟದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಯಡಿಯೂರಪ್ಪ ಸಲಹೆ - ಸೂಚನೆ ನೀಡಲಿದ್ದಾರೆ. ಜೊತೆಗೆ ಈ ಸಲಹೆಗಳನ್ನು ಪಾಲಸುವಂತೆ, ಬಿಜೆಪಿ ಕಾರ್ಯಕರ್ತರಿಗೆ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.

ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಗೆ, ರಾಜ್ಯ ಬಿಜೆಪಿ ಈಗಿನಿಂದಲೇ ತಯಾರಿಯಲ್ಲಿ ತೊಡಗಿದೆ. ವಿಧಾನಸಭೆಯಲ್ಲಿ ಗೆಲುವು ಸಾಧಿಸಿದರೂ, ಸರ್ಕಾರ ರಚನೆ ಮಾಡಲಾಗದ ಪರಿಸ್ಥಿಯನ್ನು, ಲೋಕಸಭಾ ಚುನಾವಣೆಯಲ್ಲಿ ಪ್ರತ್ಯುತ್ತರವಾಗಿ ನೀಡಲು ಸಜ್ಜುಗೊಂಡಿದೆ. ಇದಕ್ಕಾಗಿ ವಿಶೇಷ ಕಾಳಜಿ ವಹಿಸಿರುವ ಅಮಿತ್‌ ಷಾ, ರಾಜ್ಯ ಲೋಕಸಭಾ ಚುನಾವಣೆಯ ಮೇಲೆ ವಿಶೇಷ ಸೂಚನೆ ನೀಡಿದ್ದು, ಇದರಂತೆ ನಡೆಯಲು ರಾಜ್ಯಬಿಜೆಪಿ ವರಿಷ್ಠರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಅದೇನೇ ಆದರೂ, ಚಾಣಕ್ಯನ ತಂತ್ರಗಾರಿಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಫಲಿಸಲಿಲ್ಲ ಎಂಬ ಮಾತು ಎಲ್ಲರಿಗೂ ತಿಳಿದ ವಿಚಾರ. ಹೀಗಿದ್ದೂ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ ರಾಜಕೀಯ ಚದುರಂಗದಾಟದಲ್ಲಿ ಚಾಣಕ್ಯನ ತಂತ್ರಗಾರಿಕೆ ಫಲಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ವರದಿ : ಪವನ್, ಪೊಲಿಟಿಕಲ್ ಬ್ಯೂರೋ, ಟಿವಿ5 ಬೆಂಗಳೂರು

Next Story

RELATED STORIES