ಪ್ರಪಾತಕ್ಕೆ ಉರುಳಿ ಬಿದ್ದ ಬಸ್

X
TV5 Kannada25 Jun 2018 4:04 AM GMT
ಕಾರವಾರ: ಸರ್ಕಾರಿ ಬಸ್ಸೊಂದು ಪ್ರಪಾತಕ್ಕೆ ಬಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರವಾರದ ಬೈತಖೋಲ್ ಬಳಿ ಈ ಘಟನೆ ನಡೆದಿದ್ದು, ಕಾರವಾರದಿಂದ ಮುದಗಾ ಕಡೆ ಬಸ್ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಇನ್ನು ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲನೆ ಮಾಡುವ ವೇಳೆ ಚಾಲಕ ಕುಡಿದು ಡ್ರೈವ್ ಮಾಡಿದ್ದಕ್ಕೆ ಈ ಘಟನೆ ಸಂಭವಿಸಿದ್ದು, ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story