Top

ರಾಜ್ಯದ ಅಹವಾಲು ಕೇಳದೇ ಕಾವೇರಿ ನಿರ್ವಹಣಾ ಮಂಡಳಿ ರಚನೆ: ಸರ್ವಪಕ್ಷ ಸಭೆಗೆ ತೀರ್ಮಾನ

ರಾಜ್ಯದ ಅಹವಾಲು ಕೇಳದೇ ಕಾವೇರಿ ನಿರ್ವಹಣಾ ಮಂಡಳಿ ರಚನೆ: ಸರ್ವಪಕ್ಷ ಸಭೆಗೆ ತೀರ್ಮಾನ
X

ಸರಕಾರದ ಅಹವಾಲು ಪಡೆಯದೇ ಕೇಂದ್ರ ಸರಕಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದೆ. ಸಂಘರ್ಷ ಮಾಡುವ ಉದ್ದೇಶ ಇಲ್ಲ. ಅನ್ಯಾಯ ಸರಿಪಡಿಸಿ ಎಂದು ಮನವಿ ಮಾಡುತ್ತೇವೆ. ಈ ಸಂಬಂಧ ಸರ್ವಪಕ್ಷ ಸಭೆ ಹಾಗೂ ಸಂಸದರ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ಪ್ರಾಧಿಕಾರ ರಚನೆ ಕುರಿತು ಜೂ.18 ರಂದು ಚರ್ಚೆಗೆ ಅವಕಾಶ ನೀಡುತ್ತೇವೆ ಎಂದು ಕೇಂದ್ರ ಸರಕಾರ ತಿಳಿಸಿತ್ತು. ಆದರೆ ಏಕಾಏಕಿ ಜೂನ್ 24 ರಂದೇ ಪ್ರಾಧಿಕಾರ ಹಾಗೂ ನಿರ್ವಹಣ ಸಮಿತಿ ರಚನೆ ಮಾಡಿದ್ದಾರೆ. ನಮ್ಮ ಅಹವಾಲು ಕೇಳದೆ ಸಮಿತಿ ರಚನೆ ಮಾಡಿದ್ದಾರೆ. ಈ ಹಿನ್ನಲೆ ಪ್ರತಿಭಟನೆ ಮಾಡುತ್ತೇವೆ ಎಂದರು.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ನಮ್ಮ ತಜ್ಞರು, ಅಡ್ವೋಕೇಟ್ ಜನರಲ್ ರ ಸಲಹೆ ಪಡೆಯಲಾಗಿದೆ. ಸಂಸತ್​ನಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕಿತ್ತು‌. ನಮ್ಮ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಇದರ ವಿರುದ್ಧ ನಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕಿದೆ. ಅದಕ್ಕಾಗಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಸಿದ್ದೇವೆ ಎಂದರು.

ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದಿಂದ ಇಬ್ಬರು ಪ್ರತಿನಿಧಿಗಳನ್ನು ಹೆಸರಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಕಾರ್ಯಕರ್ತ ರಾಕೇಶ್ ಸಿಂಗ್ ಮತ್ತು ಕಾವೇರಿ ನೀರಾವರಿ ನಿಗಮದ ಅಧ್ಯಕ್ಷ ಹೆಚ್.ಎಲ್ ಪ್ರಸನ್ನ ಹೆಸರು ಶಿಫಾರಸು ಮಾಡಲಾಗಿದೆ. ಜೂನ್ 23ಕ್ಕೇ ಇಬ್ಬರ ಹೆಸರು ಶಿಫಾರಸು ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ವಿವರಿಸಿದರು.

Next Story

RELATED STORIES