ರಾಜ್ಯ ಸರಕಾರಕ್ಕೆ ತೊಂದರೆ ಕೊಟ್ಟರೆ ಸುಮ್ಮನಿರಲ್ಲ: ಮೋದಿಗೆ ನಂಜಾವಧೂತ ಸ್ವಾಮೀಜಿ ಎಚ್ಚರಿಕೆ

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರಕಾರ 5 ವರ್ಷ ಅಧಿಕಾರ ಪೂರ್ಣಗೊಳಿಸಲಿದೆ. ಈ ಹಿಂದೆ ತೊಂದರೆ ಕೊಟ್ಟಂತೆ ಕುಮಾರಸ್ವಾಮಿ ಸರಕಾರಕ್ಕೆ ತೊಂದರೆ ಕೊಟ್ಟರೆ ಜನ ಸುಮ್ಮನಿರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀ ನಂಜಾವಧೂತ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡರ ದಿನಾಚರಣೆ ವೇಳೆ ಮಾತನಾಡಿದ ಅವರು, ಅತ್ಯಂತ ಒಳ್ಳೆಯ ಮುಖ್ಯಮಂತ್ರಿ ಈ ಬಾರಿ ಇದ್ದಾರೆ. ಅವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.

ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ರಾಜ್ಯದ ಡೈನಾಮಿಕ್ ನಾಯಕರು. ಇವರಿಬ್ಬರು ಸೇರಿದಂತೆ ರಾಜ್ಯದಲ್ಲಿ ಮಹಾಕ್ರಾಂತಿ ಆಗಲಿದೆ ಎಂದು ನಂಜಾವಧೂತ ಸ್ವಾಮೀಜಿ ಹೇಳಿದರು.

ಇದೇ ವೇಳೆ  ಶಾಲಾ– ಕಾಲೇಜುಗಳ ಪಠ್ಯ ಪುಸ್ತಕದಲ್ಲಿ ಕೆಂಪೇಗೌಡರ ಇತಿಹಾಸ ಸೇರಬೇಕು. ಜೊತೆಗೆ ಬೆಂಗಳೂರಿನ ಒಂದು ವಿಶ್ವವಿದ್ಯಾಲಯಕ್ಕೆ ಕೆಂಪೇಗೌಡರ ಹೆಸರಿಡಬೇಕು. ಈ ಮೂಲಕ ಜನರಿಗೆ ಕೆಂಪೇಗೌಡರ ಇತಿಹಾಸ ತಿಳಿಸುವ ಕೆಲಸ ಆಗಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.