Top

ಶುಲ್ಕ ಹೆಚ್ಚಳ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

ಶುಲ್ಕ ಹೆಚ್ಚಳ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ
X

ಶಿವಮೊಗ್ಗ : ಪದವಿ ಕಾಲೇಜುಗಳ ಪ್ರವೇಶಕ್ಕೆ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಎಬಿವಿಪಿ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಶಿವಮೊಗ್ಗದ ಸಹ್ಯಾದ್ರೀ ಕಾಲೇಜಿನ ಆವರಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಲೇಜು ವಿದ್ಯಾರ್ಥಿಗಳು ಶುಲ್ಕ ಹೆಚ್ಚಳವನ್ನು ವಿರೋಧಿಸಿದರು. 2018-19 ನೇ ಸಾಲಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಗಳ ಶುಲ್ಕವನ್ನು 4 ಸಾವಿರ ರೂ. ಗಳಿಂದ 7ಸಾವಿರ ರೂ. ಗೆ ಹೆಚ್ಚಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ನಿಯಮದ ಪ್ರಕಾರ ಯಾವುದೇ ಕಾಲೇಜಿನ ಶುಲ್ಕವನ್ನು ಶೇ.25ಕ್ಕಿಂತ ಹೆಚ್ಚಿಸುವಂತಿಲ್ಲ. ಆದರೆ, ಈ ನಿಯಮಕ್ಕೆ ವಿರುದ್ಧವಾಗಿ ಶೇ. 75 ರಷ್ಟು ಹೆಚ್ಚಿಸಲಾಗಿದೆ.

ಇದರಿಂದಾಗಿ ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿದ್ದು, ಈ ಕೂಡಲೇ ಶುಲ್ಕ ಹೆಚ್ಚಳವನ್ನು ಮರು ಪರಿಶೀಲಿಸಿ, ಹೆಚ್ಚುವರಿ ಹಣವನ್ನು ಮರುಪಾವತಿಸಿಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

Next Story

RELATED STORIES