Top

ಮಲೆನಾಡಲ್ಲಿ ಧಾರಾಕಾರ ಮಳೆ : ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

ಮಲೆನಾಡಲ್ಲಿ ಧಾರಾಕಾರ ಮಳೆ : ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ
X

ಶಿವಮೊಗ್ಗ : ಕಳೆದ ಒಂದು ವಾರದಿಂದ ಕಡಿಮೆಯಾಗಿದ್ದ ಮುಂಗಾರು ಕಳೆದ ಒಂದು ದಿನದಿಂದ ಮಲೆನಾಡಿನಲ್ಲಿ ಮುಂಗಾರು ಬಿರುಸುಗೊಂಡಿದೆ. ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದಿದೆ. ಜೊತೆಗೆ ಎಂಟನೇ ತಿರುವಿನಲ್ಲಿ ರಸ್ತೆ ಕುಸಿಯಲಾರಂಭಿಸಿದೆ.

ಇದೇ ರೀತಿ ಮಳೆ ಮುಂದುವರೆದು ರಸ್ತೆ ಕುಸಿದ ಹೆಚ್ಚಿದಲ್ಲಿ ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಮಲೆನಾಡು ತಾಲೂಕುಗಳಾದ ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕುಗಳಲ್ಲಿ ಮಳೆ ಪ್ರಮಾಣ ಹೆಚ್ಚಿರುವುದರಿಂದಾಗಿ ನದಿ ತೊರೆ, ಹಳ್ಳಗಳು ತುಂಬಿ ಹರಿಯುತ್ತಿವೆ.

ತೀರ್ಥಹಳ್ಳಿ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದಾಗಿ ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯಕ್ಕೆ 30,561 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 30,526 ಕ್ಯೂಸೆಕ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

Next Story

RELATED STORIES