Top

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು.!!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು.!!
X

ಬಾಗಲಕೋಟೆ: ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಕಾರೊಂದು ಧಗಧಗನೆ ಹೊತ್ತು ಉರಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದಲ್ಲಿ ನಡೆದಿದೆ.

ಜಿಲ್ಲೆಯ ತೇರದಾಳ ಪಟ್ಟಣದ ರಫೀಕ ಇನಾಮದಾರ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ರಬಕವಿ ಪಟ್ಟಣಕ್ಕೆ ರಿಪೇರಿಗಾಗಿ ಬಂದಿದ್ದರು ಎನ್ನಲಾಗಿದೆ. ಈ ಮಧ್ಯ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ತೆರಳುತ್ತಿರುವಾಗ ಹಿಂದಿನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಇದ್ರಿಂದ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನ್ರು ಗಮನಕ್ಕೆ ತರುತ್ತಲೇ ಚಾಲಕ ತಕ್ಷಣ ಕಾರು ನಿಲ್ಲಿಸಿ ಹೊರಗೆ ಓಡಿ ಬಂದಿದ್ದಾನೆ. ಇದ್ರಿಂದ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಇನ್ನು ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ನೀರು ಹಾಕಿ ಬೆಂಕಿ ಶಮನಗೊಳಿಸಿದ್ರು. ರಬಕವಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

Next Story

RELATED STORIES