ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಬ್ಲಾಸ್ಟ್ ಪ್ರಕರಣ : ಇಂದು ಆರೋಪಿಗಳ ಹೇಳಿಕೆ ದಾಖಲು
ಬೆಂಗಳೂರು : ಕಳೆದ 10 ಏಪ್ರಿಲ್ 2010ರಂದು ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ಸಿಟಿ ಸಿವಿಲ್ ಕೋರ್ಟ್ನ 50ನೇ ಹಾಲ್ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಿರುವ ನ್ಯಾಯಾಧೀಶರು, ಬಂಧಿತ ನಾಲ್ವರು ಆರೋಪಿಗಳ ಹೇಳಿಕೆಯನ್ನು ದಾಖಲಿಸಲಿದ್ದಾರೆ.
ಅಂದಹಾಗೇ ಎಸಿಪಿ ನ್ಯಾಮೇಗೌಡ ನೇತೃತ್ವದಲ್ಲಿ ತನಿಖೆ ನಡೆಸಿದ್ದ ಪೊಲೀಸರು ನಾಲ್ವರು ಆರೋಪಿಗಳನ್ನು ಪ್ರಕರಣ ಸಂಬಂಧ ಬಂದಿಸಲಾಗಿತ್ತು. ಇದರಲ್ಲಿ ಯಾಸಿನ್ ಬಟ್ಕಳ್ ಪ್ರಮುಖ ಆರೋಪಿಯಾಗಿದ್ದನು. ಈತನಿಗೆ ಸಹಕಾರ ನೀಡಿದ ಹಿನ್ನಲೆಯಲ್ಲಿ ಮತ್ತೆ ಮೂವರನ್ನು ಬಂಧಿಸಲಾಗಿತ್ತು. ಈ ಆರೋಪಿಗಳೆಲ್ಲರೂ ಕಳೆದ 6 ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.
ಇಂತಹ ಪ್ರಕರಣ ಸಂಬಂಧ ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಪರಪ್ಪನ ಅಗ್ರಹಾರದ ಜೈಲಿನಿಂದ ಸಿಟಿ ಸಿವಿಲ್ ಕೋರ್ಟ್ಗೆ ಆರೋಪಿಗಳನ್ನು ಹಾಜರು ಪಡಿಸುವ ಪೊಲೀಸರು, ಸಿಟಿ ಸಿವಿಲ್ ಕೋರ್ಟ್ನ 50ನೇ ಕೋರ್ಟ್ನಲ್ಲಿ ಹಾಜರು ಪಡಿಸಲಿದ್ದಾರೆ. ಈ ಮೂಲಕ ನ್ಯಾಯಾಧೀಶರ ಮುಂದೆ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗುತ್ತದೆ.