ರಾಜ್ಯದ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ

ಬೆಂಗಳೂರು : ಕಾಂಗ್ರೆಸ್ನಲ್ಲಿ ಕುತೂಹಲ ವಿದ್ಯಾಮಾನಕ್ಕೆ ಸಾಕ್ಷಿಯಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ, ದಿನೇಶ್ ಗುಂಡೂರಾವ್ ಅವರನ್ನು, ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಕೆಪಿಸಿಸಿ ನೇಮಕ ಮಾಡಿದೆ.
ಈ ಹೊಣೆಯನ್ನು 2010ರಿಂದ ಡಾ.ಜಿ.ಪರಮೇಶ್ವರ್ ನಿರ್ವಹಿಸುತ್ತಿದ್ದರು. ಇವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡ ಮೇಲೆ, ಯಾರಿಗೆ ರಾಜ್ಯದ ಕೆಪಿಸಿಸಿ ಅಧ್ಯಕ್ಷರ ಪಟ್ಟ ದೊರೆಯುತ್ತದೆ ಎಂಬುದು ಕುತೂಹಲ ಮೂಡಿಸಿತ್ತು. ಈ ನಡುವೆ ಕಾಂಗ್ರೆಸ್ನ ಹಿರಿಯರಾದ, ಹೆಚ್.ಕೆ.ಪಾಟೀಲ್ ಅವರಿಗೆ ಈ ಹೊಣೆಗಾರಿಕೆಯನ್ನು ನೀಡಲಿದೆ ಎಂದು ಹೇಳಲಾಗುತ್ತಿತ್ತು.
ಆದರೇ ಈ ಎಲ್ಲಾ ಕುತೂಹಲಕ್ಕೆ ಇಂದು ಸಂಜೆಯೊಳಗೆ ತೆರೆಬೀಳಲಿದೆ. ರಾಜ್ಯದ ಕೆಪಿಸಿಸಿ ಅಧ್ಯಕ್ಷರಾಗಿ ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ದಿನೇಶ್ ಗುಂಡೂರಾವ್ ಅವರನ್ನು, ರಾಜ್ಯದ ನೂತನ ಅಧ್ಯಕ್ಷರಾಗಿ ನೇಮಕ ಮಾಡಿದೆ. ಈ ಬಗ್ಗೆ ಇಂದು ಸಂಜೆಯೊಳಗೆ ಕೆಪಿಸಿಸಿಯಿಂದ ಅಧಿಕೃತ ಆದೇಶ ಹೊರಬಿದ್ದಿದೆ.
ಇನ್ನೂ ದಿನೇಶ್ ಗುಂಡೂರಾವ್ ಹೊಣೆಗಾರಿಕೆಯನ್ನು ಈಶ್ವರ ಖಂಡ್ರೆ ಹೆಗಲಿಗೆ ವಹಿಸಲಾಗಿದೆ. ಈಶ್ವರ ಖಂಡ್ರೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಹಲವು ದಿನಗಳಿಂದ ಯಾರ್ ಆಗ್ತಾರೆ ಕೆಪಿಸಿಸಿ ಅಧ್ಯಕ್ಷರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.