Top

ಕೆಆರ್‌ಎಸ್‌ಗೆ ಡಿಸ್ನಿಲ್ಯಾಂಡ್ ರೂಪ: ಕುಮಾರಸ್ವಾಮಿ ಘೋಷಣೆ

ಕೆಆರ್‌ಎಸ್‌ಗೆ ಡಿಸ್ನಿಲ್ಯಾಂಡ್ ರೂಪ: ಕುಮಾರಸ್ವಾಮಿ ಘೋಷಣೆ
X

ಈ ಬಾರಿಯ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಸಲು ಸರ್ಕಾರ ಚಿಂತಿಸಿದೆ.

ಮೈಸೂರಿನ ಕೆ.ಆರ್.ಎಸ್‌ನ್ನು ಅಭಿವೃದ್ಧಿ ಮಾಡಲು ಚಿಂತಿಸಲಾಗಿದ್ದು, ಅಮೇರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆ.ಆರ್.ಎಸ್ ಅಭಿವೃದ್ಧಿ ಮಾಡಲು ಚಿಂತನೆ ಮಾಡಲಾಗಿದೆ. ಈ ಯೋಜನೆಗೆ ಬಂಡವಾಳ ಹೂಡಲು ವಿಶ್ವಮಟ್ಟದ ಉದ್ಯಮಿಗಳು ತಯಾರಿದ್ದು, ಇದರ ವಿವರವಾದ ಕಾರ್ಯಯೋಜನೆ ಸಿದ್ಧಪಡಿಸಲು 5ಕೋಟಿ ಒದಗಿಸಲು ತೀರ್ಮಾನಿಸಲಾಗಿದೆ.

ಅನೇಕ ಪ್ರವಾಸಿ ತಾಣಗಳಲ್ಲಿ ಸ್ಥಳದ ಬಗ್ಗೆ ವಿವರಿಸಲು ಮಾರ್ಗದರ್ಶಿಗಳ(ಗೈಡ್) ವ್ಯವಸ್ಥೆ ಮಾಡಲು, ಉತ್ತಮ ಗುಣಮಟ್ಟದ ಹೊಟೇಲ್ ಒದಗಿಸಲು ನಿರ್ಧರಿಸಲಾಗಿದೆ. ಪ್ರವಾಸಿಗರಿಗೆ ರಸ್ತೆ ಬದಿಯಲ್ಲಿ ಆಹಾರ ಸೇವಿಸಿ, ವಿಶ್ರಾಂತಿ ತೆಗೆದುಕೊಂಡು ಹೋಗಲು, ಮಾದರಿ ರಸ್ತೆ ನಿರ್ಮಿಸುವುದಕ್ಕೆ ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೇಲೂರು, ಹಂಪಿ, ವಿಜಯಪುರದಲ್ಲಿ ಗೈಡ್ ಆಗಿ ಕೆಲಸ ಮಾಡಲು ಮುಂದೆ ಬರುವ ಯುವಕ-ಯುವತಿಯರಿಗೆ ತರಬೇತಿ ನೀಡಲು ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ.

ಚಾಮರಾಜನಗರ ಜಿಲ್ಲೆಯಲ್ಲಿರುವ ಭರಚುಕ್ಕಿ ಜಲಪಾತ ಮತ್ತು ಮಂಡ್ಯದಲ್ಲಿರುವ ಗಗನಚುಕ್ಕಿ ಜಲಪಾತಗಳು ಪ್ರವಾಸಿಗರ ಆಕರ್ಷಣೀಯ ತಾಣಗಳಾಗಿದ್ದು, ಪ್ರತಿನಿತ್ಯ ಸಾವಿರಾರು ಜನ ಈ ಸ್ಥಳಕ್ಕೆ ಭೇಟಿ ನೀಡುವರು. ಆದ್ದರಿಂದ ಈ ಸ್ಥಳದಲ್ಲಿ ಹೆಚ್ಚುವರಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲು ಚಿಂತಿಸಲಾಗಿದ್ದು, 5ಕೋಟಿ ರೂ.ಅನುದಾನ ನೀಡಲಾಗಿದೆ.

ರಾಮನಗರ ಜಿಲ್ಲೆಯಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಮತ್ತಷ್ಟು ಸದೃಢಗೊಳಿಸಲು ರಾಮನಗರದ ಬಳಿ ಆರ್ಟ್ಸ್ ಅಂಡ್ ಕ್ರಾಫ್ಟ್ ವಿಲೇಜನ್ನು ಮತ್ತು ಕಣ್ವ ಜಲಾಶಯದ ಪ್ರದೇಶದಲ್ಲಿ ಚಿಲ್ಡ್ರನ್ಸ್ ವರ್ಲ್ಡ್ ಯೋಜನೆಯನ್ನು ಖಾಸಗಿ ಸಹಭಾಗಿತ್ವದೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

Next Story

RELATED STORIES