Top

ತುಮಕೂರಿನ ಬಳಿ ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ : ಮೂವರು ಸಾವು

ತುಮಕೂರಿನ ಬಳಿ ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ : ಮೂವರು ಸಾವು
X

ತುಮಕೂರು : ಕಳೆದ ಮೊನ್ನೆಯಷ್ಟೇ ಲಾರಿ-ಕಾರು ನಡುವಿನ ಭೀಕರ ರಸ್ತೆ ಅಪಘಾತಕ್ಕೆ ತುಮಕೂರು ಬಳಿಯ ಮಧುಗಿರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನುಪ್ಪಿರುವ ಘಟನೆ ಜಿಲ್ಲೆಯ ತಿಪಟೂರಿನ ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹಿಂಡಸ್ಕೆರೆ ಬಳಿ, ಈ ದುರ್ಘಟನೆ ನಡೆದಿದ್ದು, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಚಿತ್ರದುರ್ಗ ಮೂಲಕ ವಿನಯ್(22), ಶಿರಾ ತಾಲ್ಲೂಕಿನ ಬರಗೂರಿನ ತಿಪ್ಪೇಸ್ವಾಮಿ(40) ಹಾಗೂ ಬೆಂಗಳೂರಿನ ಅರವಿಂದ್‌(32) ಎಂದು ಗುರುತಿಸಲಾಗಿದೆ.

ಈ ಮೂವರು ಬೆಂಗಳೂರಿನ ಬಾಸ್ಕೋ ಕಂಪನಿಯಲ್ಲಿ ಟೆಕ್ನೀಶಿಯನ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದರೆನ್ನಲಾಗಿದೆ. ಶಿವಮೊಗ್ಗದಲ್ಲಿ ಸ್ನೇಹಿತನ ವಿವಾಹವಿದ್ದ ಕಾರಣ, ತೆರಳಿ ವಿವಾಹ ಮುಗಿಸಿಕೊಂಡು ಬೆಂಗಳೂರಿನ ಕಡೆಗೆ ಮರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹಿಂಡಸ್ಕೆರೆ ಬಳಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಕೆ.ಬಿ.ಕ್ರಾಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story

RELATED STORIES