Top

ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬಿತ್ತು ಲಾಠಿ ಏಟು

ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬಿತ್ತು ಲಾಠಿ ಏಟು
X

ತುಮಕೂರು: ಉಚಿತ ಬಸ್​ಗಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ ಪರಿಣಾಮ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಪ್ರಹಾರ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ನಗರದ ಶಿವಕುಮಾರಸ್ವಾಮೀಜಿ ಸರ್ಕಲ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನಿನ್ನೆ ಎಬಿವಿಪಿ ಸಂಘಟನೆಯೊಂದಿಗೆ ತೆರಳಿದ್ದ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಗಾಗಿ ಒತ್ತಾಯಿಸಿದ್ದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಪೊಲೀಸರ ನಡೆ ಖಂಡಿಸಿ ಇಂದು ರಸ್ತೆಗಳಿದಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಏಕಾಏಕಿ ರಸ್ತೆ ತಡೆಗೆ ಮುಂದಾದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ಧಾರೆ. ಪೊಲೀಸರ ಲಾಠಿ ಚಾರ್ಜ್ ಗೆ ಬೆದರಿದ ವಿದ್ಯಾರ್ಥಿಗಳು ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ. ಬಸ್ ಕೆಳಗೆ ಬಚ್ಚಿಟ್ಟುಕೊಂಡ ವಿದ್ಯಾರ್ಥಿಯೊಬ್ಬನನ್ನು ಎಳೆದು ಪೊಲೀಸರು ಹಲ್ಲೆ ನಡೆಸಿದ್ದಾರೆ. ಹೊಸಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Next Story

RELATED STORIES