Top

4 ವರ್ಷದಲ್ಲಿ ಪ್ರಧಾನಿ ಮೋದಿ ಮೈಸೂರಿಗೆ ಕೊಟ್ಟಿದ್ದೇನು?

4 ವರ್ಷದಲ್ಲಿ ಪ್ರಧಾನಿ ಮೋದಿ ಮೈಸೂರಿಗೆ ಕೊಟ್ಟಿದ್ದೇನು?
X

ಮೈಸೂರು: ಮೈಸೂರಿನ ಅರಮನೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದು, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಕೇಂದ್ರ ಸರ್ಕಾರದ 4 ವರ್ಷಗಳ ಸಾಧನೆಗಳ ವಿವರಗಳನ್ನೊಳಗೊಂಡ ಪುಸ್ತಕ ನೀಡಿದ್ದಾರೆ.

ನಾಲ್ಕು ವರ್ಷಗಳಲ್ಲಿ ಪ್ರಧಾನಿ ಮೋದಿ ಮೈಸೂರಿಗೆ ಕೊಟ್ಟ ಕೊಡುಗೆಗಳ ಬಗ್ಗೆ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ತಂದಿರುವ ಅನುದಾನಗಳನ್ನು ಬಿಂಬಿಸುವ ಸಮಗ್ರ ವಿವರಗಳನ್ನೊಳಗೊಂಡಿರುವ ಪುಸ್ತಕವನ್ನು ಸಂಸದ ಪ್ರತಾಪ್ ಸಿಂಹ ಯದುವೀರ್‌ಗೆ ನೀಡಿದರು.ಈ ಮೂಲಕ ಮೈಸೂರಿಗೆ ಕೇಂದ್ರ ಸರ್ಕಾರ ನೀಡಿರುವ ಕಾರ್ಯಕ್ರಮಗಳ ಬಗ್ಗೆ ಮನವರಿಕೆ ಮಾಡಿದರು.

ಇನ್ನು ಪ್ರಧಾನಿ ಮೋದಿಯವರ ಆಡಳಿತಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಮೋದಿ ಬಗ್ಗೆ ಯದುವೀರ್ ಒಲವು ವ್ಯಕ್ತಪಡಿಸಿದ್ದು, ಕೇಂದ್ರದ ಬಿಜೆಪಿ ಸರ್ಕಾರವನ್ನು ಯದುವೀರ್ ಹಾಡಿಹೊಗಳಿದ್ದಾರೆ.

ಅಭಿವೃದ್ದಿ ಕಾರ್ಯಗಳನ್ನು ಮಾಡಲು ಕೇಂದ್ರ ಸರ್ಕಾರಕ್ಕೆ 5 ವರ್ಷ ಸಾಕಾಗುವುದಿಲ್ಲ. ನರೇಂದ್ರ ಮೋದಿ ಅವರಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮತಷ್ಟು ಕಾಲಾವಕಾಶ ನೀಡಬೇಕು ಎಂದು ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Next Story

RELATED STORIES