ಕರಾವಳಿಯಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

X
TV5 Kannada11 July 2018 11:00 AM GMT
ಕೆಲವು ದಿನಗಳ ವಿಶ್ರಾಂತಿ ನಂತರ ಮರಳಿರುವ ಮುಂಗಾರು ಮಳೆ ಮತ್ತೆ ಆರ್ಭಟಿಸತೊಡಗಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ತೀರಗಳಾದ ಮಂಗಳೂರು, ಉಡುಪಿ ಅಲ್ಲದೇ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಮಡಿಕೇರಿ ಮುಂತಾದೆಡೆ ಸತತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳು ಹಾನಿಗೀಡಾದ ವರದಿಯಾಗಿವೆ.
ಮುಂದಿನ ದಿನಗಳಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ಮಳೆ ನಿರೀಕ್ಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Next Story