Top

ನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗೋದಿಲ್ಲ

ನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗೋದಿಲ್ಲ
X

ಮೈಸೂರು: ನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗೋದಿಲ್ಲ ಎಂದು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು 35ವರ್ಷದಿಂದ ಪಕ್ಷದಲ್ಲೇ ಇದ್ದೇನೆ, ಇನ್ಮೇಲೆಯೂ ಪಕ್ಷದಲ್ಲೇ ಇರ್ತಿನಿ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದಿರುವವರು ಪಿತೂರಿ ಮಾಡುತ್ತಿದ್ದಾರೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲೇ ಮಾತಾಡುತ್ತೇನೆ. ಚುನಾವಣೆ ಸೋಲಿನ ನಂತರ ನಾನೂ ದಿಗ್ಭ್ರಮೆಗೊಳಗಾಗಿದ್ದೆ. ಸೋಲಿನಿಂದ ಆಚೆ ಬರಲು ಒಂದೂವರೆ ತಿಂಗಳು ಬೇಕಾಯ್ತು. ದೇಹದ ಅಂಗಾಂಗ ಪುನಶ್ಚೇತನಕ್ಕೆ‌ ಒಂದೂವರೆ ತಿಂಗಳಾಯಿತು. ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಕೃತಿ ಚಿಕಿತ್ಸೆಗೆ ತೆರಳಿದ್ದೆ. ಈ ಕಾರಣದಿಂದ ಸಭೆ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ ಎಂದು ಹೆಚ್.ಸಿ.ಮಹದೇವಪ್ಪ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ತಮ್ಮ ಮತ್ತು ಸಿದ್ದರಾಮಯ್ಯ ಗೆಳೆತನದ ಬಗ್ಗೆ ಮಾತನಾಡಿದ ಹೆಚ್.ಸಿ.ಮಹದೇವಪ್ರಸಾದ್, ನನ್ನ ಸಿದ್ದರಾಮಯ್ಯ ನಡುವೆ ಸ್ನೇಹ ಹಳಸಿದೆ ಅಂತಾ ಹೇಳಿದವರು ಯಾರು? ಸಿದ್ದರಾಮಯ್ಯನವರೇನಾದ್ರು ಹೇಳಿದ್ದಾರಾ..? ನಾವು ಚೆನ್ನಾಗಿಯೇ ಇದ್ದೇವೆ. ನಮ್ಮ ಸಂಬಂಧ ಕೆಟ್ಟಿದೆ ಅಂತಾ ಸುದ್ದಿ ಸೃಷ್ಟಿಸಿ ಲಾಭ ಮಾಡಿಕೊಳ್ಳುವ ಕೆಲಸವನ್ನು ಕೆಲವರು ಮಾಡ್ತಿದ್ದಾರೆ. ಆ ರೀತಿಯ ಪ್ರಯತ್ನ ಯಶಸ್ವಿ ಆಗೋಲ್ಲ ಎಂದು ಹೇಳಿದ್ದಾರೆ.

ನನ್ನ ಸೋಲಿಗೆ ಜೆಡಿಎಸ್ ಗೆಲುವು ಕಾರಣವಲ್ಲ. ಬದಲಿಗೆ ಬಿಜೆಪಿ ತಾನು ಗೆಲ್ಲಲು ಆಗದ ಜಾಗದಲ್ಲಿ ತನ್ನ ಓಟುಗಳನ್ನು ಬಿಜೆಪಿಗೆ ವರ್ಗಾವಣೆ ಮಾಡಿದ್ದೇ ಕಾರಣ.ಈ ಸೋಲು ನನಗೆ ದಿಗ್ಭ್ರಾಂತನಾಗಿಸಿತು. ಅಭಿವೃದ್ಧಿ ಮೇಲೆ ಜಾತಿ ಸವಾರಿ ಮಾಡಿತು. ನಮ್ಮ ಯೋಜನೆಗಳಿಗೆ ಜನ ಮನ್ನಣೆ ನೀಡಲೇ ಇಲ್ಲ. ನನ್ನ ಸೋಲಿಗಿಂತ ಸಿದ್ದರಾಮಯ್ಯ ಹಾಗೂ ಪಕ್ಷದ ಸೋಲು ನನಗೆ ಆಘಾತ ಮೂಡಿಸಿತು. ಇದರಿಂದ ಹೊರಬರಲು ನಮಗೆ ಒಂದೂವರೆ ತಿಂಗಳು ಬೇಕಾಯಿತು. ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿಕೆ.

Next Story

RELATED STORIES