Top

ಕೆಪಿಎಸ್​ಸಿ 362 ಪ್ರೊಬೆಷನರಿ ಹುದ್ದೆಗಳ ನೇಮಕದಲ್ಲಿ ಅಕ್ರಮ: ಮಧ್ಯಂತರ ಅರ್ಜಿ ವಜಾ

ಕೆಪಿಎಸ್​ಸಿ 362 ಪ್ರೊಬೆಷನರಿ ಹುದ್ದೆಗಳ ನೇಮಕದಲ್ಲಿ ಅಕ್ರಮ: ಮಧ್ಯಂತರ ಅರ್ಜಿ ವಜಾ
X

ಬೆಂಗಳೂರು: 2011ನೇ‌ ಸಾಲಿನ ಕರ್ನಾಟಕ ಲೋಕ ಸೇವಾ ಆಯೋಗದ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಅಕ್ರಮ ನೇಮಕಾತಿ ಆರೋಪದ ಸಂಬಂಧ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಹಿಂದೆ ಎಲ್ಲ 362 ಹುದ್ದೆಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಆಯ್ಕೆಯಾದ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮುಖ್ಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆಯೇ ಎಂಬ ಕುರಿತು ಪರಿಶೀಲನೆ ನಡೆಸುವಂತೆ ಸೂಚಿಸಿ, ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ವರ್ಗಾಯಿಸಿತ್ತು.

ಇದೀಗ ಹೈಕೋರ್ಟ್ ಮಧ್ಯಂತರ ಅರ್ಜಿಗಳನ್ನು ವಜಾಗೊಳಿಸಿದ್ದು, ಈ ಹಿಂದೆ 362 ಹುದ್ದೆ ನೇಮಕಾತಿ ರದ್ದುಪಡಿಸಿ ನೀಡಿದ್ದ ಆದೇಶ ಊರ್ಜಿತವಾಗಲಿದೆ.

Next Story

RELATED STORIES