ಮಂಡ್ಯದಲ್ಲಿ ಹಾಡುಹಗಲೇ ಗ್ಯಾಂಗ್ವಾರ್: ಮೂವರಿಗೆ ಗಾಯ

X
TV5 Kannada14 July 2018 2:15 PM GMT
ಎರಡು ಗುಂಪುಗಳು ಲಾಂಗ್, ಮಚ್ಚು ಹಿಡಿದು ಹಾಡುಹಾಗಲೇ ಹೊಡೆದಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಶ್ರೀರಂಗಪಟ್ಟಣದ ಚಂದ್ರ, ಭರತ್, ಸತ್ಯನಾರಾಯಣ್ ಗಾಯಗೊಂಡಿದ್ದು, ಶ್ರೀರಂಗಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಮೈಸೂರಿಗೆ ರವಾನಿಸಲಾಗಿದೆ.
ಆಸ್ಪತ್ರೆ ಮುಂಭಾಗ ಜಮಾಯಿಸಿರುವ ಗಾಯಾಳುಗಳ ಸ್ನೇಹಿತರು ಹಾಗೂ ಕುಟುಂಬಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story