Top

ಮಕ್ಕಳ ಸುರಕ್ಷತೆಗೆ ಆದ್ಯತೆ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಮಕ್ಕಳ ಸುರಕ್ಷತೆಗೆ ಆದ್ಯತೆ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
X

ಬೆಂಗಳೂರು : ಮಕ್ಕಳ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ಅತ್ಯಂತ ಸೂಕ್ಷ್ಮ ವಿಷಯಗಳಾಗಿದ್ದು, ರಾಜ್ಯ ಸರ್ಕಾರ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ನೊಬೆಲ್ ಪ್ರಶಸ್ತಿ ಪುರಸ್ಕೃತ, ಬಚ್‍ಪನ್ ಬಚಾವೋ ಆಂದೋಲನ ಸ್ವಯಂ ಸೇವಾ ಸಂಸ್ಥೆಯ ಸ್ಥಾಪಕ, ಮಕ್ಕಳ ಹಕ್ಕುಗಳ ಕಾರ್ಯಕರ್ತ ಕೈಲಾಶ್ ಸತ್ಯಾರ್ಥಿ ಅವರು ಇಂದು ಸಂಜೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಮಾತನಾಡಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ, ಮಕ್ಕಳ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ಸೇರಿದಂತೆ ಹಲವು ವಿಷಯಗಳು ಅತ್ಯಂತ ಸೂಕ್ಷ್ಮವಾದ ವಿಚಾರಗಳಾಗಿವೆ. ಇಂತಹ ವಿಚಾರಗಳಿಗೆ ರಾಜ್ಯ ಸರ್ಕಾರ ಮಹತ್ವದ ಒತ್ತು ನೀಡುವುದಾಗಿ ತಿಳಿಸಿದರು.

ಬಳಿಕ ಮಾತನಾಡಿದ ಕೈಲಾಶ್ ಸತ್ಯಾರ್ಥಿ, ಮಕ್ಕಳ ಸುರಕ್ಷತೆ, ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಕೈಜೋಡಿಸಲು ತಾವು ಸಿದ್ಧ. ಮಕ್ಕಳ ಹಕ್ಕುಗಳು, ಸುರಕ್ಷತೆ ಕುರಿತು ನೀತಿಯನ್ನು ರೂಪಿಸುವ ಮೂಲಕ ರಾಜಕೀಯಕ್ಕೆ ಒಂದು ಮಾನವೀಯ ಮುಖ ನೀಡಲು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ, ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಗಳನ್ನು ಬಲಪಡಿಸುವುದು ಹಾಗೂ ಮಕ್ಕಳ ಸುರಕ್ಷತೆ ಕುರಿತು ಕಾರ್ಯಪಡೆ ರಚಿಸುವ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

Next Story

RELATED STORIES