Top

7 ದಶಕದ ನಂತರ ಬಂತು ಬಸ್: ಗ್ರಾಮದಲ್ಲಿ ಹಬ್ಬದ ವಾತಾವರಣ.!

7 ದಶಕದ ನಂತರ ಬಂತು ಬಸ್: ಗ್ರಾಮದಲ್ಲಿ ಹಬ್ಬದ ವಾತಾವರಣ.!
X

ಯಾದಗಿರಿ : ಜಿಲ್ಲಾ ಕೇಂದ್ರದಿಂದ ಐದಾರು ಕಿ.ಮೀ. ದೂರ ಇದ್ರು ಆ ಗ್ರಾಮದ ಜನರು ನಿತ್ಯ ನಡೆದುಕೊಂಡೆ ಹೋಗಬೇಕಿತ್ತು. ಸ್ವಾತಂತ್ರ್ಯ ಸಿಕ್ಕು 7 ದಶಕಗಳೇ ಕಳೆದರೂ ಈ ಗ್ರಾಮಕ್ಕೆ ಸರ್ಕಾರಿ ಬಸ್ಸಿನ ವ್ಯವಸ್ಥೆ ಇರಲಿಲ್ಲ. ಇಲ್ಲಿನ ಶಾಲಾ ಕಾಲೇಜ್ ವಿದ್ಯಾರ್ಥಿಗಳು, ಸಾರ್ವಜನಿಕರು ಐದಾರು ಕಿಲೋ ಮೀಟರ್ ವರೆಗೆ ನಡೆದುಕೊಂಡೇ ಹೋಗಬೇಕಾಗಿತ್ತು.

ಈಗ ಆ ಗ್ರಾಮಕ್ಕೆ ಸರ್ಕಾರಿ ಬಸ್ ಸಂಚಾರಿ ಆರಂಭವಾಗಿದೆ. ಹಾಗಾಗಿ ಈ ಗ್ರಾಮದಲ್ಲಿ ಹಬ್ಬದ ವಾತವರಣ ನಿರ್ಮಾಣವಾಗಿದೆ. ಇದು ಯಾದಗಿರಿಯಿಂದ ಕೂಗಳತೆ ದೂರದಲ್ಲಿರುವ ಬೀರಾಳ ಪುಟ್ಟ ಗ್ರಾಮ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನದ್ರು ಇದ್ದು ಈ ಗ್ರಾಮಕ್ಕೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಕಳೆದ ಐವತ್ತು ವರ್ಷಗಳಿಂದ ಗ್ರಾಮಸ್ಥರು ಬಸ್ಸು ಬಿಡುವಂತೆ ಜನ ಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಪತ್ರ ಸಲ್ಲಿಸಿದ್ರು ಪ್ರಯೋಜನವಾಗಿರಲಿಲ್ಲ.

ಈ ಭಾರಿ ಯಾದಗಿರಿ ವಿಧಾನಸಭೆ ಕ್ಷೇತ್ರದ ಬಿಜೆಪಿಯ ವೆಂಕಟರೆಡ್ಡಿ ಮುದ್ನಾಳ್ ಶಾಸಕರಾಗಿ ಆಯ್ಕೆಯಾದ ಮೇಲೆ, ಚುನಾವಣೆಯಲ್ಲಿ ಕೊಟ್ಟ ಭರವಸೆಯಂತೆ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ. ಹೀಗಾಗಿ ಶಾಸಕರು ಇಂದು ಗ್ರಾಮಕ್ಕೆ ಆಗಮಿಸಿ ಬಸ್ಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಇದರಿಂದ ಗ್ರಾಮಸ್ತರೇ ಖುಷಿಯಿಂದ ಬಸ್ಸಿಗೆ ಹೂವಿನ ಅಲಂಕಾರ ಮಾಡಿ ಸರ್ಕಾರಿ ಬಸ್ಸ್ ಸ್ವಾಗತಿಸಿದರು. ಅಲ್ಲದೆ ಸ್ವತಃ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಬಸ್ಸಿನಲ್ಲಿ ಕುಳಿತು ಟಿಕೆಟ್ ಪಡೆದು ಪ್ರಯಾಣಿಸಿದರು.

ಗ್ರಾಮದ ಶಾಲಾ ಕಾಲೇಜು ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶಾಸಕರಿಗೆ ಅಭಿನಂದನೆಗಳು ಹೇಳಿ ಸಂತೋಷದಿಂದ ಹೊಸ ಬಸ್ಸಿನಲ್ಲಿ ಮೊದಲ ಭಾರಿಗೆ ಬಸ್ಸ್ ನಲ್ಲಿ ಪ್ರಯಾಣ ಬೇಳೆಸಿದ್ರು.

ವರದಿ : ಬಾಳಗೌಡ ಪಾಟೀಲ್, ಟಿವಿ5 ಯಾದಗಿರಿ

Next Story

RELATED STORIES