Top

ಆಲಮಟ್ಟಿ ಡ್ಯಾಂ ಭರ್ತಿ : ಜಗಮಗಿಸುವ ವಿದ್ಯುತ್ ಅಲಂಕಾರದಲ್ಲಿ ಮನಮೋಹಕ.!

ಆಲಮಟ್ಟಿ ಡ್ಯಾಂ ಭರ್ತಿ : ಜಗಮಗಿಸುವ ವಿದ್ಯುತ್ ಅಲಂಕಾರದಲ್ಲಿ ಮನಮೋಹಕ.!
X

ವಿಜಯಪುರ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿರುವ ಕೃಷ್ಣಾ ನದಿಗೆ ಅಡ್ಡಾಲಾಗಿ ನಿರ್ಮಿಸಿರುವ ಆಲಮಟ್ಟಿ ಬಳಿಯಿರುವ ಲಾಲಬಹೂದ್ದರ ಶಾಸ್ತ್ರಿ ಸಾಗರ ಭರ್ತಿಯಾಗಿದೆ. ಆಲಮಟ್ಟಿ ಅಣೆಕಟ್ಟೆ ಭರ್ತಿಯಾದ ಹಿನ್ನೆಲೆ ನದಿಗೆ ಅಪಾರ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ.

ಕಳೆದ ಹಲವು ದಿನಗಳಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನದಿಗೆ ನೀರು ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವದರಿಂದ ಆಣೆಕಟ್ಟಿಗೆ ಒಳ ಹರಿವು ಅಧಿಕವಾಗಿದೆ. ಹೀಗಾಗಿ ಕೆಪಿಸಿಎಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆಗಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ.

ಇನ್ನು ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಮೂಲಕ ನೀರನ್ನು ಹರಿ ಬಿಡಲಾಗುತ್ತಿದೆ. ಅಣೆಕಟ್ಟಿನ ಎಲ್ಲಾ 26 ಗೆಟ್ ಗಳ ಮೂಲಕ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಕಳೆದ ಹಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದ ಕಾರಣ ಆಲಮಟ್ಟಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಆಣೆಕಟ್ಟಿನ ಎಲ್ಲಾ 26 ಗೇಟಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನಲೆ ನದಿ ದಡದಲ್ಲಿರುವ ಗ್ರಾಮಗಳ ಜನರನ್ನು ಎಚ್ಚರಿಕೆಯಿಂದ ಇರಲು ವಿಜಯಪುರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಗೇಟ್ ಗಳು ನೀರು ಬಿಡುಗಡೆ ಹೊರ ಬಿಡಲಾಗುತ್ತಿದ್ದು, ಬಣ್ಣ ಬಣ್ಣದ ಲೈಟಿಂಗ್ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ವರದಿ : ಶರಣು ಮಸಳಿ, ಟಿವಿ5 ವಿಜಯಪುರ.

Next Story

RELATED STORIES