Top

ಮೋದಿ, ಶಾಗೆ ಗಂಡಸುತನ ಇದ್ರೆ ಈ ಕೊಲೆ ಪ್ರಕರಣಕ್ಕೆ ನ್ಯಾಯ ಕೊಡಿಸಲಿ: ಅಸ್ನೋಟಿಕರ್

ಮೋದಿ, ಶಾಗೆ ಗಂಡಸುತನ ಇದ್ರೆ ಈ ಕೊಲೆ ಪ್ರಕರಣಕ್ಕೆ ನ್ಯಾಯ ಕೊಡಿಸಲಿ: ಅಸ್ನೋಟಿಕರ್
X

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾಗೆ ಗಂಡಸುತನವಿದ್ರೆ ಪರೇಶ್ ಮೇಸ್ತಾ ಪ್ರಕರಣಕ್ಕೆ ನ್ಯಾಯ ಕೊಡಿಸಲಿ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಸವಾಲ್ ಹಾಕಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಅಸ್ನೋಟಿಕರ್, ಪರೇಶ್ ಮೇಸ್ತಾ ಸಾವಿನ ವಿಚಾರದಲ್ಲಿ ಬಿಜೆಪಿ ಇನ್ನೂ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದು, ಪರೇಶ್ ಮೇಸ್ತಾ ಪ್ರಕರಣ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನ ಈಗಾಗಲೇ ಸಿಬಿಐಗೆ ವಹಿಸಲಾಗಿದೆ. ಬಿಜೆಪಿಗರು ವಿಚಾರಣೆಯನ್ನ ಆದಷ್ಟು ಬೇಗ ಮುಗಿಸಿ ನ್ಯಾಯ ಒದಗಿಸುವ ಕಾರ್ಯ ಸಿಬಿಐ ಮೇಲೆ ಒತ್ತಡ ಹೇರಬೇಕಿದೆ. ಅದನ್ನ ಬಿಟ್ಟು ಮುಂದಿನ ಲೋಕಸಭಾ ಚುನಾವಣೆವರೆಗೂ ಜೀವಂತವಾಗಿಡಲು ರಾಜಕೀಯ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

Next Story

RELATED STORIES