Top

ಅಗಸ್ಟ್ 2ರಂದು ಉತ್ತರಕ ರ್ನಾಟಕ ಬಂದ್..!!

ಅಗಸ್ಟ್ 2ರಂದು ಉತ್ತರಕ ರ್ನಾಟಕ ಬಂದ್..!!
X

ಬೆಂಗಳೂರು : ಕಳೆದ ಹಲವು ದಿನಗಳಿಂದ ಹೊಗೆಯಾಡುತ್ತಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಡು, ಅಗಸ್ಟ್‌ 2ರಂದು ಮತ್ತಷ್ಟು ಹೊತ್ತಿ ಉರಿಯಲಿದೆ. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಮಾಡುವಂತೆ ಒತ್ತಾಯಿಸಿ, ಅಗಸ್ಟ್‌ 2ರಂದು ಉತ್ತರ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕರೆ ನೀಡಿದೆ.

ಈ ಕುರಿತು ಇಂದು ಸುದ್ದಿಘೋಷ್ಠಿ ನಡೆಸಿ ಮಾತನಾಡಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಸೋಮಶೇಖರ್ ಕೊತಂಬರಿ, ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ನಿರಂತರವಾಗಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮಲತಾಯಿ ದೋರಣೆ ಅನುಸರಿಸುತ್ತಿದೆ. ಇದು ಕಳೆದ ಸಮ್ಮಿಶ್ರ ಸರ್ಕಾರದ ಬಜೆಚ್‌ನಲ್ಲೂ ಉತ್ತರ ಕರ್ನಾಟವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ ಎಂದರು.

https://www.youtube.com/watch?v=TEah3UY4ByM&list=PLmylWU4EY3N9w4lXMMtgANRMmH8JCLze3&index=55

ಈ ಹಿನ್ನಲೆಯಲ್ಲಿ ಅಗಸ್ಟ್‌ 2ರಂದು ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿದ್ದೇವೆ. ಇದಕ್ಕೆ ಉತ್ತರ ಕರ್ನಾಟಕ ರೈತ ಸಮಿತಿ, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳ ಒಕ್ಕೂಟ, ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿಸಿದರು.

Next Story

RELATED STORIES