Top

ಶಾಹಿದ್ ಅಫ್ರಿದಿ ದಾಖಲೆ ಸರಿಗಟ್ಟಿದ ಕ್ರಿಸ್ ಗೇಲ್: ಏನದು ಗೊತ್ತಾ?

ಶಾಹಿದ್ ಅಫ್ರಿದಿ ದಾಖಲೆ ಸರಿಗಟ್ಟಿದ ಕ್ರಿಸ್ ಗೇಲ್: ಏನದು ಗೊತ್ತಾ?
X

ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ನ ಬ್ಯಾಟಿಂಗ್ ದೈತ್ಯ 5 ಸಿಕ್ಸರ್ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಪಾಕಿಸ್ತಾನದ ಶಾಹಿದ್ ಅಫ್ರಿದಿ ದಾಖಲೆಯನ್ನು ಸರಿಗಟ್ಟಿದರು.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 66 ಎಸೆತಗಳಲ್ಲಿ 73 ರನ್ ಸಿಡಿಸಿದ ಕ್ರಿಸ್ ಗೇಲ್, 5 ಸಿಕ್ಸರ್ ಸಿಡಿಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 476 ರನ್ ಸಿಡಿಸಿದ ದಾಖಲೆ ಬರೆದರು. ಕ್ರಿಸ್ ಗೇಲ್ 443 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಶಾಹಿದ್ ಅಫ್ರಿದಿ 524 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.

ಆಗಸ್ಟ್ 1ರಿಂದ ಬಾಂಗ್ಲಾದೇಶ ವಿರುದ್ಧ ಮೂರು ಟಿ-20 ಪಂದ್ಯಗಳ ಸರಣಿ ಆರಂಭವಾಗಲಿದ್ದು, ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಹಿಂದಿಕ್ಕುವ ಅವಕಾಶವನ್ನು ಗೇಲ್ ಹೊಂದಿದ್ದಾರೆ.

Next Story

RELATED STORIES