ರ್ಯಾಂಕಿಂಗ್ ಪಟ್ಟಿಯಲ್ಲಿ ಟಾಪ್ ಒನ್ ಯಾರು ಗೊತ್ತಾ?

X
TV5 Kannada31 July 2018 7:32 AM GMT
ಐಸಿಸಿ ನೂತನ ಏಕದಿನ ಶ್ರೇಯಾಂಕ ಬಿಡುಗಡೆಗೊಂಡಿದ್ದು, ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿ ಭಾರತೀಯ ಆಟಗಾರರೇ ನಂಬರ್ 1 ಸ್ಥಾನ ಉಳಿಸಿಕೊಂಡಿದ್ದಾರೆ.
ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದು, ಬೌಲಿಂಗ್ನಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಪ್ರಥಮ ಸ್ಥಾನ ಉಳಿಸಿಕೊಂಡಿದ್ದಾರೆ. ಏಕದಿನ ರ್ಯಾಂಕಿಂಗ್ನಲ್ಲಿ 911 ರೇಟಿಂಗ್ ಪಾಯಿಂಟ್ಗಳೊಂದಿಗೆ ವಿರಾಟ್ ನಂಬರ್ 1 ಪಟ್ಟದಲ್ಲಿ ಭದ್ರವಾಗಿದ್ದಾರೆ. ಎರಡನೇ ಸ್ಥಾನದಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಇದ್ದರೆ ಇಂಗ್ಲೆಂಡ್ ಜೋ ರೂಟ್ 3ನೇ ಸ್ಥಾನ ಅಲಂಕರಿಸಿದ್ದಾರೆ.
ಇನ್ನು ಬೌಲಿಂಗ್ನಲ್ಲಿ ಬುಮ್ರಾ ಬಳಿಕ ಅಫ್ಘಾನಿಸ್ತಾನ ತಂಡದ ರಶೀದ್ ಖಾನ್ ಎರಡನೇ ಹಾಗೂ, ಪಾಕಿಸ್ತಾನದ ಹಸನ್ ಅಲಿ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಸ್ಪಿನ್ ಟ್ವಿನ್ಸ್ ಕುಲ್ದೀಪ್ ಯಾದವ್ ಹಾಗೂ ಯುಜುವೇಂದ್ರ ಚಹಾಲ್ ಸಹ ಟಾಪ್ 10 ನಲ್ಲಿ ಕಾಣಿಸಿಕೊಂಡಿದ್ದಾರೆ.
Next Story